ಕರ್ನಾಟಕ

karnataka

By

Published : Sep 20, 2019, 8:32 PM IST

ETV Bharat / state

ಅಕ್ರಮ ಡಿನೋಟಿಫಿಕೇಷನ್: ಪ್ರಕರಣ ರದ್ದು ಕೋರಿ ಹೈಕೋರ್ಟ್​ಗೆ ಮೊರೆ ಹೋದ ಕುಮಾರಸ್ವಾಮಿ

2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಎಂಬುವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಇದರ ವಿರುದ್ಧ ಮಾಜಿ ಸಿಎಂ ಹೆಚ್​ಡಿಕೆ ಹೈಕೋರ್ಟ್​ ಮೊರೆ ಹೋಗಿದ್ದಾರೆ.

4502744

ಬೆಂಗಳೂರು:ಅಕ್ರಮ‌ ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ತಮ್ಮ ವಿರುದ್ಧ ಜನಪ್ರತಿನಿಧಿ ನ್ಯಾಯಾಲಯ ವಿಚಾರಣೆ ನಡೆಸಲು ನೀಡಿರುವ ಸಮನ್ಸ್ ರದ್ದತಿ ಕೋರಿ ಮಾಜಿ ಸಿಎಂ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜನಪ್ರತಿನಿಧಿ ನ್ಯಾಯಾಲಯ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ತಮಗೆ ನೀಡಿರುವ ನೋಟಿಸ್​ಗೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿಯಲ್ಲಿ ಕುಮಾರಸ್ವಾಮಿ ಕೋರಿದ್ದಾರೆ.ಈ ಅರ್ಜಿ ಹೈಕೋರ್ಟ್​ನಲ್ಲಿ ವಿಚಾರಣೆಗೆ ಬರಬೇಕಾಗಿದೆ.

2012 ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ, ಚಾಮರಾಜನಗರ ಮೂಲದ ರೈತ ಮಹಾದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜುಲೈ 20ರಂದು ದೂರು ನೀಡಿದ್ದರು. ಆಗ ವಿಚಾರಣೆ ನಡೆಸಿದ್ದ ಕೋರ್ಟ್​ ಬಿ ರಿಪೋರ್ಟ್ ವಜಾಗೊಳಿಸಿ, ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿತ್ತು.

2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಹಲಗೆ ವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಮಹಾದೇವಸ್ವಾಮಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಂತ್ರ 2012 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ 2018 ರಲ್ಲಿ ಲೋಕಾಯುಕ್ತ ನ್ಯಾಯಾಲಯ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ದೂರುದಾರರು ಕೋರ್ಟ್​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ABOUT THE AUTHOR

...view details