ಕರ್ನಾಟಕ

karnataka

ETV Bharat / state

ಜ್ಞಾನ ಇಲ್ಲದವರಂತೆ ಮಾತನಾಡುವುದನ್ನು ಬಿಟ್ಟು ತೆಪ್ಪಗಿರಿ: ಶೆಟ್ಟರ್​​ ವಿರುದ್ಧ ಕುಮಾರಸ್ವಾಮಿ ಕಿಡಿ - ಬಿಎಸ್​ ಯಡಿಯೂರಪ್ಪ

ಪಾದರಾಯನಪುರ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸಚಿವ ಜಗದೀಶ್ ಶೇಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮನಗರಕ್ಕೆ ಶಿಫ್ಟ್ ಮಾಡಲಾದ ಕೈದಿಗಳ ವಿಚಾರದಲ್ಲಿ ನಾನು ರಾಜಕಾರಣ ಮಾಡುತ್ತಿದ್ದೇನೆ ಎಂದು ಆರೋಪಿಸುವ ನೀವು ಹಿಂದೊಮ್ಮೆ ಮುಖ್ಯಮಂತ್ರಿಯಾಗಿದ್ದವರು. ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲದವರಂತೆ ಮಾತನಾಡುವುದನ್ನು ಬಿಟ್ಟು ತೆಪ್ಪಗಿರಿ ಎಂದು ಖಾರವಾಗಿ ಹೇಳಿದ್ದಾರೆ.

Kumaraswamy remarks on Jagadish Shettar's paadarayanapura statement
ಜ್ಞಾನ ಇಲ್ಲದವರಂತೆ ಮಾತನಾಡುವುದನ್ನು ಬಿಟ್ಟು ತೆಪ್ಪಗಿರಿ: ಶೆಟ್ಟರ್​ ವಿರುದ್ಧ ಕುಮಾರಸ್ವಾಮಿ ಕಿಡಿ

By

Published : Apr 25, 2020, 10:18 PM IST

ಬೆಂಗಳೂರು: ಪಾದರಾಯನಪುರದಿಂದ ವಶಕ್ಕೆ ಪಡೆದಿರುವ ಮಂದಿಯನ್ನು ರಾಮನಗರ ಜೈಲಿಗೆ ಕಳುಹಿಸಿದ್ದು ರಾಜಕೀಯ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇದೀಗ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಜಗದೀಶ್ ಶೆಟ್ಟರ್ ಅವರೇ, ಪಾದರಾಯನಪುರ ಗಲಭೆಕೋರರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡುವ ವಿಷಯದಲ್ಲಿ ಎಡಬಿಡಂಗಿತನ ಮತ್ತು ರಾಜಕಾರಣ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ನಿಮಗೆ ಗೊತ್ತಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮನಗರಕ್ಕೆ ಶಿಫ್ಟ್ ಮಾಡಲಾದ ಕೈದಿಗಳ ವಿಚಾರದಲ್ಲಿ ನಾನು ರಾಜಕಾರಣ ಮಾಡುತ್ತಿದ್ದೇನೆ ಎಂದು ಆರೋಪಿಸುವ ನೀವು ಹಿಂದೊಮ್ಮೆ ಮುಖ್ಯಮಂತ್ರಿಯಾಗಿದ್ದವರು. ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲದವರಂತೆ ಮಾತನಾಡುವುದನ್ನು ಬಿಟ್ಟು ತೆಪ್ಪಗಿರಿ ಎಂದು ಖಾರವಾಗಿ ಹೇಳಿದ್ದಾರೆ.

ಕುಮಾರಸ್ವಾಮಿ ಟ್ವೀಟ್​

ನಾನು ಸಣ್ಣ ರಾಜಕಾರಣ ಮಾಡುತ್ತೇನೆ ಎಂದು ದೂಷಿಸುವ ನಿಮಗೆ ಸರ್ಕಾರ ಮತ್ಯಾಕೆ ಯು ಟರ್ನ್ ತೆಗೆದುಕೊಂಡು ಕೈದಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಿತು?. ಮೊದಲೇ ಈ ಕೆಲಸ ಮಾಡಿದ್ದರೆ ನಿಮ್ಮ ಸರ್ಕಾರಕ್ಕೊಂದು ಮರ್ಯಾದೆ ಇರುತ್ತಿತ್ತು ಎಂದು ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿ ಬಿಜೆಪಿ ಸರ್ಕಾರ ಸಾಧಿಸಿದ್ದಾದರೂ ಏನನ್ನು? ರೋಗ ನಿಯಂತ್ರಿಸಬೇಕಾದ ಸರ್ಕಾರವೇ ರೋಗ ಹಂಚಿದ್ದು ಸರ್ಕಾರದ ವೈಫಲ್ಯ ಅಲ್ಲದೆ ಮತ್ತೇನು? ನಿಮ್ಮದು ಸಣ್ಣ ರಾಜಕಾರಣ. ನನ್ನದಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ABOUT THE AUTHOR

...view details