ಬೆಂಗಳೂರು:ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಆರಂಭಿಸಿದೆ. ಇಂದು ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.
ಡಾ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮತ್ತು ಸಚಿವ ಸಿ.ಎಸ್. ಶಿವಳ್ಳಿ ಅಕಾಲಿಕ ನಿಧನದಿಂದ ತೆರವಾಗಿರುವ ಕುಂದಗೋಳ ಕ್ಷೇತ್ರಕ್ಕೆಮೇ 19 ರಂದುಉಪ ಚುನಾವಣೆಗೆ ನಡೆಯಲಿದೆ. ಇದಕ್ಕಾಗಿ ಬಿಜೆಪಿ ಸಿದ್ಧತೆ ಆರಂಭಿಸಿದೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬೈ ಎಲೆಕ್ಷನ್ ಅಖಾಡಕ್ಕಿಳಿಸಲು ಇಂದು ಅಭ್ಯರ್ಥಿಗಳ ಆಯ್ಕೆಗಾಗಿ ಸಭೆ ಕರೆಯಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ಉಭಯ ಕ್ಷೇತ್ರಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ ಎನ್ನಲಾಗ್ತಿದೆ.
ಕಳೆದ ಬಾರಿ ಕುಂದಗೋಳ ಕ್ಷೇತ್ರದಲ್ಲಿ634 ಮತಗಳ ಅಲ್ಪ ಅಂತರದಲ್ಲಿ ಪರಾಭವಗೊಂಡಿದ್ದಬಿಜೆಪಿಯ ಚಿಕ್ಕನಗೌಡಹಾಗೂ ಚಿಂಚೋಳಿಯಲ್ಲಿ 19 ಸಾವಿರದಷ್ಟು ಮತಗಳ ಅಂತರದಲ್ಲಿ ಪರಾಭವಗೊಂಡಿದ್ದ ಸುನೀಲ್ ವಲ್ಯಾಪುರೆ ಅವರನ್ನೇ ಕಣಕ್ಕಿಳಿಸಬೇಕು ಎನ್ನುವ ಒಲವನ್ನು ರಾಜ್ಯ ನಾಯಕರು ಹೊಂದಿದ್ದಾರೆ ಎನ್ನಲಾಗ್ತಿದೆ. ಈ ಸಂಬಂಧ ಇಂದಿನ ಸಭೆಯಲ್ಲಿ ಅಂತಿಮ ಚರ್ಚೆ ನಡೆಯಲಿದೆ.