ಬೆಂಗಳೂರು :ಕರ್ನಾಟಕ ರಾಜ್ಯದ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜಧಾನಿಯ ರಾಜಭವನದ ಮುಂದೆ ಜೂನ್ 26ರಂದು ಪ್ರತಿಭಟನೆ ನಡೆಸಲಿದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.
ವಿದ್ಯುತ್ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸಿರುವ ಹೋರಾಟ 214ನೇ ದಿನಕ್ಕೆ ಮುಂದುವರೆದಿದೆ. 550ಕ್ಕೂ ಹೆಚ್ಚು ರೈತರು ಹೋರಾಟಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದಾರೆ ಎಂದು ಕರ್ನಾಟಕದ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.