ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಕುರುಕ್ಷೇತ್ರದ ಆಡಿಯೋ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಕೋರಮಂಗಲದ ಇಂಡೋರ್ ಸ್ಟೇಡಿಯಂನಲ್ಲಿ ಕುರುಕ್ಷೇತ್ರ ಆಡಿಯೋ ಬಿಡುಗಡೆಗಾಗಿ ಅದ್ದೂರಿ ಸೆಟ್ ರೆಡಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಚಿತ್ರದ ಆಡಿಯೋ ಲೋಕಾರ್ಪಣೆಯಾಗಲಿದೆ.
ಕುರುಕ್ಷೇತ್ರ ಆಡಿಯೋ ಬಿಡುಗಡೆಗೆ: ತಂಡೋಪತಂಡವಾಗಿ ಬರುತ್ತಿರುವ ಅಭಿಮಾನಿಗಳು - ravichandran
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಕುರುಕ್ಷೇತ್ರದ ಆಡಿಯೋ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಕೋರಮಂಗಲದ ಇಂಡೋರ್ ಸ್ಟೇಡಿಯಂನಲ್ಲಿ ಕುರುಕ್ಷೇತ್ರ ಆಡಿಯೋ ಬಿಡುಗಡೆಗಾಗಿ ಅದ್ದೂರಿ ಸೆಟ್ ರೆಡಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಚಿತ್ರದ ಆಡಿಯೋ ಲೋಕಾರ್ಪಣೆಯಾಗಲಿದೆ.
ಈಗಾಗ್ಲೆ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕ್ರೇಜಿ ಸ್ಟಾರ್ ರವಿಚಂದ್ರನ್ ಆಗಮಿಸಿದ್ದಾರೆ. ಕಾರ್ಯಕ್ರಮಕ್ಕಾಗಿ ದಚ್ಚು ಅಭಿಮಾನಿಗಳಿಗೆ ಹತ್ತು ಸಾವಿರಕ್ಕೂ ಹೆಚ್ಚಿನ ಪಾಸುಗಳನ್ನು ನೀಡಲಾಗಿದ್ದು, ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳು ತಂಡೋಪತಂಡವಾಗಿ ಸ್ಟೇಡಿಯಂನತ್ತ ಹರಿದುಬರುತ್ತಿದ್ದಾರೆ. ಅಲ್ಲದೆ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿನಯಿಸಿದ್ದು, ನಿಖಿಲ್ ಅಭಿಮಾನಿಗಳಿಗೂ ಕಾರ್ಯಕ್ರಮದ ಪಾಸ್ಗಳನ್ನು ನೀಡಲಾಗಿದೆ.
ಮಂಡ್ಯ ಚುನಾವಣೆ ನಂತರ ಡಿಬಾಸ್ ಹಾಗೂ ನಿಖಿಲ್ ಕುಮಾರಸ್ವಾಮಿ ಇವತ್ತೇ ಮೊದಲು ವೇದಿಕೆಯನ್ನು ಹಂಚಿಕೊಳ್ಳುತ್ತಾರೆ ಎಂಬ ಕುತೂಹಲ ಕೂಡ ಎಲ್ಲರಲ್ಲಿ ಮನೆ ಮಾಡಿದೆ. ಅಲ್ಲದೆ ಕಾರ್ಯಕ್ರಮಕ್ಕೆ ನೀಡಿದ್ದ ಪಾಸ್ಗಿಂತ ಹೆಚ್ಚಿನ ಅಭಿಮಾನಿಗಳು ಆಗಮಿಸಿದ್ದರಿಂದ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಅಭಿಮಾನಿಗಳ ಮೇಲೆ ಲಘು ಲಾಠಿ ಪ್ರಹಾರ ಮಾಡಿದ್ದಾರೆ.