ಬೆಂಗಳೂರು: ಕಳೆದ 20 ದಿನಗಳಿಂದ ಮತ ಪ್ರಚಾರ ಕಾರ್ಯ ಕೈಗೊಂಡಿದ್ದೇನೆ. ಜನರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದೆ ಎಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ತಿಳಿಸಿದರು.
ಬಿಜೆಪಿ ಅಸಮಾಧಾನಿತ ಕಾರ್ಯಕರ್ತರ ಬೆಂಬಲ ಸಿಕ್ಕಿದ್ದು ಗೆಲುವು ನನ್ನದಾಗಲಿದೆ: ಕುಸುಮಾ ಹನುಮಂತರಾಯಪ್ಪ - rr nagar by election updates
ಉಪಚುನಾವಣೆ ಹಿನ್ನೆಲೆ ಕೆಲ ದಿನಗಳಿಂದ ಮತ ಪ್ರಚಾರ ಕಾರ್ಯ ಕೈಗೊಂಡಿದ್ದು, ಜನರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಬಿಜೆಪಿ ಅಸಮಾಧಾನಿತ ಕಾರ್ಯಕರ್ತರು ನನಗೆ ಬೆಂಬಲ ನೀಡಿದ್ದಾರೆ, ಹೀಗಾಗಿ ಗೆಲುವು ನನ್ನದಾಗಾಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಜೆಪಿ ಪಾರ್ಕ್ ಬಳಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ತಮ್ಮ ಮನೆ ಮಗಳು ಎಂದು ಎಲ್ಲರೂ ನನಗೆ ಪ್ರೀತಿ-ವಿಶ್ವಾಸದಿಂದ ಕಾಣುತ್ತಿದ್ದಾರೆ. ನಿನ್ನೆ ವಿಜಯ ದಶಮಿಯಂದು ರಾಜರಾಜೇಶ್ವರಿ ತಾಯಿ ಸೇವೆ ಮಾಡಿದ್ದೇನೆ. ಉರುಳು ಸೇವೆ ಮೂಲಕ ತಾಯಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಬಿಜೆಪಿ ಅಸಮಾಧಾನಿತ ಕಾರ್ಯಕರ್ತರು ನನಗೆ ಬೆಂಬಲ ನೀಡಿದ್ದಾರೆ, ಹೀಗಾಗಿ ಗೆಲುವು ನನ್ನದಾಗಾಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಎಲ್ಲಾ ಮುಖಂಡರು ಬಂದು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಪಕ್ಷಾತೀತವಾಗಿ ಕ್ಷೇತ್ರದಲ್ಲಿ ನನಗೆ ಸಹಾಯ ಸಹಕಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ತುಂಬಾ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಕಾಂಗ್ರೆಸ್ ಪಕ್ಷದ ಎಲ್ಲರೂ ಒಟ್ಟಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದರು.