ಬೆಂಗಳೂರು: ಕೇಂದ್ರ ಸರ್ಕಾರ ಜನವಿರೋಧಿ ಕಾರ್ಮಿಕ ವಿರೋಧಿ ನೀತಿ ಅನಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿವೆ. ಇನ್ನು ಇದರಲ್ಲಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಶಾಖೆ ಭಾಗಿಯಾಗಲಿದೆ.
ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಮುಷ್ಕರ: ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಭಾಗಿ
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನಾಳೆ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿವೆ. ಮುಷ್ಕರದಲ್ಲಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಕರ್ನಾಟಕ ರಾಜ್ಯ ಶಾಖೆ ಭಾಗಿಯಾಗಲಿದೆ.
ಈ ಕುರಿತು ಮಾಹಿತಿ ನೀಡಿದ ಐಎನ್‌ಟಿಯುಸಿ ಅಧ್ಯಕ್ಷ ಪ್ರಕಾಶ್, ಪ್ರತಿಭಟನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬಳಿ ಅನುಮತಿ ಕೇಳಿದ್ದೇವೆ.ಅವರು ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಬಿಡಲ್ಲ. ಫ್ರೀಡಂ ಪಾರ್ಕ್‌ಗೆ ಹೋಗಿ ಸಭೆ ಮಾಡಿ ಎಂದು ತಿಳಿಸಿದ್ದಾರೆ ಎಂದರು.
ನಾಳೆ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರ್ಯಾಲಿ ಉದ್ಘಾಟಿಸಲಿದ್ದಾರೆ. ಕೆ.ಪಿಸಿ.ಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಉಗ್ರಪ್ಪ, ಕೆಪಿಸಿಸಿ ಕಾರ್ಮಿಕ ವಿಭಾಗದ ಸದಸ್ಯರೂ ಸೇರಿದಂತೆ ವಿವಿಧ ಸಂಘಟನೆಗಳು ಪಾಲ್ಗೊಳ್ಳಲಿವೆ.