ಬೆಂಗಳೂರು: ನಫೆಡ್ ಮೂಲಕ ಕೊಬ್ಬರಿ ಖರೀದಿ ಮಾಡುತ್ತೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈತರಿಂದ 11,300 ರೂ.ನಲ್ಲಿ ಖರೀದಿಸುತ್ತೇವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಹಾಗೂ ಡಿಸಿ ಜೊತೆ ಮಾತಾಡಿದ್ದೇನೆ ಎಂದರು.
ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಮಾಧುಸ್ವಾಮಿ ಒಣಕೊಬ್ಬರಿ ಬೆಳೆಗಾರರಿಗೆ ತೊಂದರೆ ಆಗುತ್ತಿದೆ. ಸರ್ಕಾರ ಖರೀದಿ ಮಾಡಬೇಕಿದೆ. 38 ಕೋಟಿ ರೂ. ಸರ್ಕಾರಕ್ಕೆ ಹೊರೆಯಾಗುತ್ತದೆ. ಆದರೂ ಖರೀದಿ ಮಾಡುವ ತೀರ್ಮಾನವನ್ನು ಸರ್ಕಾರ ಮಾಡಿದೆ. ಒಂದು ಸಾವಿರ ರೂ. ಹೆಚ್ಚಿಗೆ ನೀಡಲು ತೀರ್ಮಾನ ಮಾಡಲಾಗಿದೆ. ಒಟ್ಟು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ 11,300 ರೂ. ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.
ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಮಾಧುಸ್ವಾಮಿ ಆಯಾ ಭಾಗದಲ್ಲಿರುವ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ತುಮಕೂರು ಹಾಗೂ ಹಾಸನದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ, ಸಂಪುಟ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ, ಗೋಪಾಲಯ್ಯ ಅವರು ಒಣಕೊಬ್ಬರಿ ಬಗ್ಗೆ ಪ್ರಸ್ತಾಪ ಮಾಡಿ, ಬೆಂಬಲ ಬೆಲೆ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. 10,300 ರೂ. ಕೇಂದ್ರ ನಿಗದಿ ಮಾಡಿದೆ. ಅದಕ್ಕೆ ರಾಜ್ಯ ಸರ್ಕಾರ ಒಂದು ಸಾವಿರ ನೀಡುತ್ತದೆ. ಒಟ್ಟು 11,300 ರೂ. ನೀಡುವುದಕ್ಕೆ ತೀರ್ಮಾನ ಮಾಡಲಾಗಿದೆ. ಇವತ್ತಿನ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.