ಬೆಂಗಳೂರು :ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿ ಸಾರಿಗೆ ಇಲಾಖೆಗೆ ಕಾಯಕಲ್ಪ ನೀಡುವ ಕುರಿತು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಇಸ್ರೋದ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಇಸ್ರೋ ಮುಖ್ಯ ಕಚೇರಿಯಲ್ಲಿ ಮಾತುಕತೆ ನಡೆಸಿದ ಅವರು, ಇಸ್ರೋ ತಂತ್ರಜ್ಞಾನವನ್ನು ಪಡೆದು ಪ್ರಮುಖವಾಗಿ ಸಾರಿಗೆ ಇಲಾಖೆಯ ಕಾರ್ಯ ನಿರ್ವಹಣೆಯ ಗುಣಮಟ್ಟವನ್ನು ಮತ್ತಷ್ಟು ಪುನಶ್ಚೇತನಗೊಳಿಸುವ ಬಗ್ಗೆ ಮತ್ತು ಸಾರಿಗೆ ಸಂಸ್ಥೆಗಳಾದ ಕೆಎಸ್ಆರ್ಟಿಸಿ ವಾಯವ್ಯ ಸಾರಿಗೆ ಸಂಸ್ಥೆ, ಈಶಾನ್ಯ ಸಾರಿಗೆ ಸಂಸ್ಥೆ, ಬಿಎಂಟಿಸಿ ಮುಂತಾದ ಸಂಸ್ಥೆಗಳ ವೆಚ್ಚಗಳನ್ನು ಕಡಿಮೆ ಮಾಡಿ ಆದಾಯ ಹೆಚ್ಚಿಸುವ ಮಾರ್ಗೋಪಾಯದ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಿದರು.