ಕರ್ನಾಟಕ

karnataka

ETV Bharat / state

ವಿವಾದಿತ ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿಧಾನ ಪರಿಷತ್ತಿನಲ್ಲಿ ಸಿಗದ ಅನುಮೋದನೆ

ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್ಆರ್ ಪಾಟೀಲ್, ಸದಸ್ಯರಾದ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ ಸೇರಿದಂತೆ ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಅಂಗೀಕಾರವಿಲ್ಲದೆ ಮುಕ್ತಾಯಗೊಂಡ ಅಧಿವೇಶನದಲ್ಲಿ ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ವಿಧೇಯಕಗಳಿಗೆ ಕೊನೆಗೂ ಪರಿಷತ್ತಿನಲ್ಲಿ ಅಂಗೀಕಾರ ಸಿಗಲಿಲ್ಲ.

assembly session
ವಿಧಾನಪರಿಷತ್

By

Published : Sep 27, 2020, 5:32 AM IST

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿನ ತೀವ್ರ ಗದ್ದಲದ ನಡುವೆ ಬಹು ವಿವಾದಿತ ರಾಜ್ಯ ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯ ಬಗ್ಗೆ ಚರ್ಚೆ ನಡೆಯಿತು.

ವಿಧಾನಸಭೆಯಲ್ಲಿ ಅನುಮೋದನೆ ಪಡೆದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಯನ್ನು ವಿಧಾನ ಪರಿಷತ್ತಿನಲ್ಲಿ ತಡರಾತ್ರಿ ಕಂದಾಯ ಸಚಿವ ಆರ್. ಅಶೋಕ್ ಮಂಡಿಸಿದರು. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್ಆರ್ ಪಾಟೀಲ್, ಸದಸ್ಯರಾದ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ ಸೇರಿದಂತೆ ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಅಂಗೀಕಾರವಿಲ್ಲದೆ ಮುಕ್ತಾಯಗೊಂಡ ಅಧಿವೇಶನದಲ್ಲಿ ಎರಡೂ ‌ವಿವಾದಿತ ವಿಧೇಯಕಗಳಿಗೆ ಕೊನೆಗೂ ಪರಿಷತ್ತಿನಲ್ಲಿ ಅನುಮೋದನೆ ಸಿಗಲಿಲ್ಲ.

ವಿಪಕ್ಷಗಳ ಬಿಗಿಪಟ್ಟು ಹಿನ್ನೆಲೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆದರೂ ಸಹ ಅಂಗೀಕಾರವಾಗದ ವಿಧೇಯಕಗಳು ಪಾಸ್​​ ಆಗದೆ ಉಳಿದವು. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸಮಯ ಮೀರಿದ ಕಾರಣ ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿಕೆ ಮಾಡಿದರು.

ABOUT THE AUTHOR

...view details