ಬೆಂಗಳೂರು:ಪ್ರೊ.ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ಹಾಗೂ ಅವರ ಪತಿ ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಭಗವಾನ್ ಸ್ವತಃ ಪ್ರಕರಣ ದಾಖಲು ಮಾಡಿದ್ದಾರೆ. ನ್ಯಾಯಾಲಯದ ಆವರಣದಲ್ಲೇ ಹಲ್ಲೆ ಹಾಗೂ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮೈಸೂರು ತಲುಪುವಷ್ಟರಲ್ಲಿ ನನ್ನ ಸಂಘಟನೆ ಹುಡುಗರು ನಿನ್ನನ್ನು ಕೊಲ್ಲಲಿದ್ದಾರೆ ಎಂದು ಮೀರಾ, ಭಗವಾನ್ ಅವರಿಗೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.