ಬೆಂಗಳೂರು :ನಮ್ಮ ಇಲಾಖೆ ನೌಕರರು ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಸಿಎಂ ಭೇಟಿಯಾಗಿ ಚರ್ಚೆ ಮಾಡಿದ ಬಳಿಕ ಮಾತನಾಡಿದ ಅವರು, ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಿ. ನಾನು ಇತರೆ ಎಲ್ಲಾ ಕೆಲಸ-ಕಾರ್ಯಗಳನ್ನು ಬಿಟ್ಟು, ನಮ್ಮ ನೌಕರರ ಆಗಮನಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಇದುವರೆಗೂ ಯಾರೂ ಮಾತುಕತೆಗೆ ಬಂದಿಲ್ಲ. ನೌಕರರ ಮುಷ್ಕರದಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮತ್ತೊಮ್ಮೆ ನಮ್ಮ ನೌಕರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.