ಕರ್ನಾಟಕ

karnataka

ETV Bharat / state

ಸಿಎಂ ಭೇಟಿಯಾಗಿ ಪರಿಷತ್ ಟಿಕೆಟ್​ಗೆ ಮನವಿ ಮಾಡಿದ ಸವದಿ - ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಿಜ್ವಾನ್ ಹರ್ಷದ್ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

Laxman Savadi visit to  CM
ಸಿಎಂ ಭೇಟಿಯಾದ ಸವದಿ

By

Published : Jan 29, 2020, 11:52 AM IST

ಬೆಂಗಳೂರು: ರಿಜ್ವಾನ್ ಹರ್ಷದ್ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಡಿಸಿಎಂ ಲಕ್ಷ್ಮಣ ಸವದಿ ಭೇಟಿ ನೀಡಿದರು. ಫೆಬ್ರವರಿ 17ರಂದು ಖಾಲಿ‌ ಇರುವ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ಮೂಲಕ ಖಾಲಿ ಇರುವ ಎಂಎಲ್​ಸಿ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡುವಂತೆ ಸಿಎಂ ಬಿಎಸ್​ವೈಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಈ ಸ್ಥಾನಕ್ಕೆ ಅನರ್ಹ ಶಾಸಕ ಆರ್.ಶಂಕರ್ ಪಟ್ಟು ಹಿಡಿದಿದ್ದು, ಆ ಸ್ಥಾನ ಎಲ್ಲಿ ಕೈತಪ್ಪಲಿದೆಯೋ ಎಂದು ಸಿಎಂ ಬಿಎಸ್​ವೈಗೆ ಸವದಿ ಒತ್ತಡ ಹಾಕಿ ಟಿಕೆಟ್ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details