ಬೆಂಗಳೂರು:ಕಾಂಗ್ರೆಸ್ ಹಿರಿಯ ಸದಸ್ಯೆ, ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕಿ ಲಕ್ಷ್ಮೀ ದೇವಮ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಲಕ್ಷ್ಮೀದೇವಮ್ಮ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ - ಲಕ್ಷ್ಮೀದೇವಮ್ಮ ನಿಧನ
ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯೆ ಲಕ್ಷ್ಮೀ ದೇವಮ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
DKS condoles
'ಕಾಂಗ್ರೆಸ್ ಸದಸ್ಯೆಯಾಗಿದ್ದ ಲಕ್ಷ್ಮೀ ದೇವಮ್ಮ ಅವರು, ಪಕ್ಷಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಒಕ್ಕಲಿಗರ ಸಂಘದ ಬೆಳವಣಿಗೆಯಲ್ಲಿ ಇವರ ಕೊಡುಗೆ ಅಪಾರವಾಗಿದೆ. ಸಮುದಾಯದವರ ನೋವಿಗೆ ಸ್ಪಂದಿಸಿ, ಅವರ ಏಳಿಗೆಗೆ ಶ್ರಮಿಸಿದ್ದಾರೆ ಎಂದು ವಿವರಿಸಿದ್ದಾರೆ.
ಭಾರತ್ ಕೋಆಪರೇಟಿವ್ ಬ್ಯಾಂಕ್ಗೆ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿರುವ ಲಕ್ಷ್ಮೀ ದೇವಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ಡಿ.ಕೆ ಶಿವಕುಮಾರ್ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.