ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯು ಪರೀಕ್ಷೆ ಆರಂಭದ ದಿನವೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಉಪನ್ಯಾಸಕರ ಆಗ್ರಹ

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದೆ. ಈ ನಡುವೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಮೇಲ್ವಿಚಾರಣೆ ಕಾರ್ಯದಲ್ಲಿ ಉಪನ್ಯಾಸಕರು ಭಾಗಿಯಾಗಿದ್ದಾರೆ.

lecturers-demand-for-the-fulfillment-of-various-demands
ದ್ವಿತೀಯ ಪಿಯು ಪರೀಕ್ಷೆ

By

Published : Mar 4, 2020, 11:50 AM IST

Updated : Mar 4, 2020, 3:09 PM IST

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಈ ನಡುವೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಪ್ಪು ‌ಪಟ್ಟಿ ಧರಿಸಿ ಪರೀಕ್ಷಾ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಉಪನ್ಯಾಸಕರಿಂದ ಪ್ರತಿಭಟನೆ

ಈವರೆಗೆ ಸಾಂಕೇತಿಕವಾಗಿ ಪ್ರತಿಭಟನೆಯನ್ನ ಮಾಡಿದ್ದೇವೆ, ನಮ್ಮ ಬೇಡಿಕೆ ಈಡೇರದಿದಲ್ಲಿ ಮೌಲ್ಯಮಾಪನ ಬಹಿಷ್ಕರಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಉಪನಾಸ್ಯಕರ ಬೇಡಿಕೆಗಳೇನು?

  • ಕುಮಾರ್ ನಾಯಕ ವರದಿ ಜಾರಿಗೆ ತರುವಂತೆ ಆಗ್ರಹ
  • ಉಪನಾಸ್ಯಕರ ವೇತನ ತಾರತಮ್ಯ ಹೋಗಲಾಡಿಸಬೇಕು
  • ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಅನುಪಾತ ಕಡಿಮೆಗೊಳಿಸಬೇಕು
  • ಮೌಲ್ಯಮಾಪನದ ಬಳಿಕ ಚೆಕ್ ಮೂಲಕ ಮೊತ್ತ ನೀಡಬೇಕು
  • ಅನುದಾನಿತ ಕಾಲೇಜು ಉಪನ್ಯಾಸಕರ ವೇತನ ತಾರತಮ್ಯ ನಿವಾರಿಸಬೇಕು

ಈ ಹಿಂದೆ ನಾಲ್ಕು ಬಾರಿ ಪ್ರತಿಭಟನೆ ಮಾಡಿದ್ದ ಉಪನಾಸ್ಯಕರು, ಪಿಯು ಪರೀಕ್ಷೆ ವೇಳೆ ಕಪ್ಪು ಪಟ್ಟಿ ಧರಿಸಿ ಮೇಲ್ವಿಚಾರಣೆಗೆ ಹಾಜರಾಗಿದ್ದರು. ಇಂದು ಕೂಡ ಅದೇ ಮಾರ್ಗವನ್ನು ಅನುಸರಿಸಿದ್ದಾರೆ.

Last Updated : Mar 4, 2020, 3:09 PM IST

ABOUT THE AUTHOR

...view details