ಬೆಂಗಳೂರು:ರೈತ ಮುಖಂಡ ರಾಕೇಶ್ ಟಿಕಾಯಿತ್ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅವರ ಮೇಲೆ ಪತ್ರಕರ್ತರ ಸೋಗಿನಲ್ಲಿ ಬಂದು ಮಸಿ ಹಾಕಿದ್ದಾರೆ. ಅವರು ಯಾವುದೇ ಪಕ್ಷದವರಾದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಯಾವುದೇ ಪಕ್ಷದವರಾಗಿರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ - ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ
ಪತ್ರಕರ್ತರ ಸೋಗಿನಲ್ಲಿ ಬಂದು ರಾಕೇಶ್ ಟಿಕಾಯಿತ್ ಮೇಲೆ ಮಸಿ ಹಾಕಿದ್ದಾರೆ. ಅವರು ಯಾವುದೇ ಪಕ್ಷದವರಾದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇದು ಅಮಾನವೀಯ ಪ್ರಕರಣ. ನಮ್ಮಲ್ಲಿ ಇಂತಹ ಘಟನೆ ಎಂದೂ ನಡೆದಿರಲಿಲ್ಲ. ಅವರು ಯಾವ ಪಕ್ಷದವರೇ ಆಗಿರಲಿ ಕ್ರಮ ಕೈಗೊಳ್ಳುತ್ತೇವೆ. ಈ ರೀತಿ ಮಾಡಲು ಯಾವ ಪಕ್ಷ ಹೇಳಿಕೊಡುತ್ತದೆ ಹೇಳಿ ಎಂದು ಪ್ರಶ್ನಿಸಿದರು. ಪಠ್ಯ ವಿಚಾರ ಮರೆ ಮಾಚಲು ಈ ಪ್ರಕರಣ ಮಾಡಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಬರುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿದೆ. ಹಾಗಾಗಿ ಕಾಂಗ್ರೆಸ್ ಈ ರೀತಿ ಆರೋಪ ಮಾಡುತ್ತಿದೆ. ಶಿವಕುಮಾರ್ ಮಾತಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ:ರಾಕೇಶ್ ಟಿಕಾಯಿತ್ ಮೇಲೆ ಮಸಿ ಬಳಿದ ಪ್ರಕರಣ : ಪತ್ರಿಕಾಗೋಷ್ಠಿ ಮೊಟಕುಗೊಳಿಸಲು ಮೂವರಿಂದ ಹಲ್ಲೆ.. ಡಿಸಿಪಿ