ಬೆಂಗಳೂರು: ಅತ್ಯುತ್ತಮ ಕರ್ತವ್ಯ ಪ್ರಜ್ಞೆ ಹಾಗೂ ಸದ್ದಿಲ್ಲದೆ ತಮ್ಮ ಪಾಡಿಗೆ ತಾವು ನಿಷ್ಠೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿರುವ ಡಾ.ಸಿ.ಎನ್.ಅಶ್ವತ್ಥನಾರಾಯಣರ ಪದವಿ ಮುಂದಿರುವ 'ಉಪ' ಹೋಗಿ ಆದಷ್ಟು ಬೇಗ ಮುಖ್ಯಮಂತ್ರಿ ಎಂಬ ಪದನಾಮ ಬರುವಂತಾಗಲಿ. ಅದಕ್ಕೆ ಬೇಕಾದ ಎಲ್ಲ ಕೃಪೆ-ಚೈತನ್ಯವನ್ನು ಆ ಪರಮಶಿವ ನೀಡಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಶುಭ ಹಾರೈಸಿದರು.
ಮಲ್ಲೇಶ್ವರದಲ್ಲಿ ಗುರುವಾರ ರಾತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಷನ್ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಅಶ್ವತ್ಥನಾರಾಯಣ ಕೇವಲ ಮಾತನಾಡುತ್ತಲೇ ಕೆಲಸ ಮಾಡುವ ವ್ಯಕ್ತಿಯಲ್ಲ. ಅಬ್ಬರ ಇಲ್ಲ, ಆಡಂಬರ ಇಲ್ಲದ ವ್ಯಕ್ತಿ. ಅವರು ಮಾಡುತ್ತಿರುವ ಉತ್ತಮ ಕೆಲಸಗಳೇ ಅವರ ಬಗ್ಗೆ ಮಾತನಾಡುತ್ತಿವೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಬಿಡುವಿಲ್ಲದ ಕೆಲಸಗಳಲ್ಲಿ ತೊಡಗಿಬಿಡುತ್ತಾರೆಂದು ಸದಾನಂದಗೌಡರು ಮಾರ್ಮಿಕವಾಗಿ ನುಡಿದರು.