ಬೆಂಗಳೂರು: ಮೈಸೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ಗೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.
ತನ್ವೀರ್ ಸೇಠ್ಗೆ ಸರ್ಕಾರ ಭದ್ರತೆ ಒದಗಿಸಲಿ: ಕಾಂಗ್ರೆಸ್ ಆಗ್ರಹ
ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ. ತನ್ವೀರ್ ಸೇಠ್ ಅವರಿಗೆ ಭದ್ರತೆಯನ್ನು ಸರ್ಕಾರ ಒದಗಿಸಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದೆ.
ತನ್ವೀರ್ ಸೇಠ್
ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದ ಹಿನ್ನೆಲೆ ಟ್ವೀಟ್ ಮೂಲಕ ಈ ಮನವಿ ಮಾಡಿರುವ ಕಾಂಗ್ರೆಸ್ ಪಕ್ಷ, ಮಾಜಿ ಸಚಿವ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಆಘಾತಕಾರಿ ವಿಷಯ. ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ. ತನ್ವೀರ್ ಸೇಠ್ ಅವರಿಗೆ ಭದ್ರತೆಯನ್ನು ಸರ್ಕಾರ ಒದಗಿಸಲಿ ಎಂದು ಒತ್ತಾಯಿಸಿದೆ.
ಈ ಹಲ್ಲೆಗೆ ಕಾರಣವೇನೆಂದು ಸೂಕ್ತ ತನಿಖೆಯಾಗಲಿ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಕೂಡ ತಿಳಿಸಿದೆ.