ಬೆಂಗಳೂರು:ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು,ಸಂವಿಧಾನವನ್ನು ಕೊಲ್ಲಲು ಹೊರಟ ಶಕ್ತಿಗಳ ವಿರುದ್ಧ ಹೋರಾಡೋಣ ಎಂದು ಟ್ವೀಟ್ ಮೂಲಕ ವಿರೋಧಿಗಳನ್ನು ಕುಟುಕಿದ್ದಾರೆ.
ಸಂವಿಧಾನ ಕೊಲ್ಲಲು ಹೊರಟ ಶಕ್ತಿಗಳ ವಿರುದ್ಧ ಹೋರಾಡೋಣ: ಹೆಚ್ಡಿಕೆ ಟ್ವೀಟ್ - HDK Tweet
'ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೆ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ'
ಹೆಚ್ಡಿಕೆ ಟ್ವೀಟ್
ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೆ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ. ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ ಎಂದು ಟ್ವೀಟ್ ಮಾಡಿದ್ದಾರೆ.