ಕರ್ನಾಟಕ

karnataka

ETV Bharat / state

ಸಿಇಟಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್​​ಗೆ ಕಾಲಾವಕಾಶ ಕೋರಿ ಎಐಸಿಟಿಇ ಗೆ ಪತ್ರ: ಅಶ್ವತ್ಥ್​ ನಾರಾಯಣ್​

ಕರ್ನಾಟಕ ಅನುದಾನರಹಿತ ಖಾಸಗಿ ಶೈಕ್ಷಣಿಕ ಕಾಲೇಜುಗಳ ಸಂಸ್ಥೆ (ಕೆಯುಪಿಇಸಿಎ) ಕೂಡ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ 15ರವರೆಗೆ ಕಾಲಾವಕಾಶ ವಿಸ್ತರಿಸಲು ಕೋರಿದೆ.

Ashwathth Narayan.
ಅಶ್ವತ್ಥ್​ ನಾರಾಯಣ್​.

By

Published : Dec 30, 2020, 7:19 PM IST

ಬೆಂಗಳೂರು: ವೃತ್ತಿಪರ ಕೋರ್ಸ್​ಗಳಲ್ಲಿ ಖಾಲಿ ಇರುವ ಸೀಟ್​ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜನವರಿ 15ರವರೆಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ ಶಿಕ್ಷಣ ಇಲಾಖೆಯು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷರಿಗೆ ಪತ್ರ ಬರೆದಿದೆ ಎಂದು ಡಿಸಿಎಂ ಅಶ್ವತ್ಥ್​​ ನಾರಾಯಣ್​ ತಿಳಿಸಿದ್ದಾರೆ.

ಉಳಿದಿರುವ ವೃತ್ತಿಪರ ಕೋರ್ಸ್​ಗಳ ಸೀಟ್​ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಸಲ ಕೊನೆಯದಾಗಿ ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಇದರ ಜೊತೆಗೆ, ಕರ್ನಾಟಕ ಅನುದಾನರಹಿತ ಖಾಸಗಿ ಶೈಕ್ಷಣಿಕ ಕಾಲೇಜುಗಳ ಸಂಸ್ಥೆ (ಕೆಯುಪಿಇಸಿಎ) ಕೂಡ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ 15ರವರೆಗೆ ಕಾಲಾವಕಾಶ ವಿಸ್ತರಿಸಲು ಕೋರಿದೆ. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪತ್ರ ಬರೆಯಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಓದಿ:ಹೊಸ ವರ್ಷಾಚರಣೆ ನೆಪದಲ್ಲಿ ನಿಯಮ ಮೀರಿದ್ರೆ ಕಠಿಣ ಕ್ರಮ: ರವಿಕಾಂತೇಗೌಡ

ಈ ಹಿಂದಿನ ಅನುಮತಿಯ ಪ್ರಕಾರ ವೃತ್ತಿಪರ ಕೋರ್ಸ್​ಗೆ ಪ್ರವೇಶ ಪಡೆಯಲು 31-12- 2020 ಕೊನೆಯ ದಿನವಾಗಿದೆ. ಆದರೆ, ಯುಜಿ ಸಿಇಟಿ ಮಾಪ್ ಅಪ್ ಸುತ್ತಿನಲ್ಲಿ ಇಂಜಿನಿಯರಿಂಗ್ ಸೀಟು ಪಡೆದಿದ್ದ ಕೆಲವು ವಿದ್ಯಾರ್ಥಿಗಳು, ಸೀಟು ಹಿಂಪಡೆದು ಶುಲ್ಕ ಮರುಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಸೋಮವಾರ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ್ದರು. ಇಂಜಿನಿಯರ್​​ ಬದಲು ಆಯುಷ್, ಬಿ.ಎಸ್ಸಿ, ಬಿ.ಕಾಂ ಅಥವಾ ಇನ್ನಿತರ ಕೋರ್ಸ್ ಗಳನ್ನು ಓದಲು ಇಚ್ಛಿಸುತ್ತೇವೆ. ಆಯುಷ್ ಕೋರ್ಸ್ ಗಳಿಗೆ ಇನ್ನೂ ಕೌನ್ಸೆಲಿಂಗ್ ನಡೆಸಿಲ್ಲ. ಆದ್ದರಿಂದ ಇಂಜಿನಿಯರಿಂಗ್ ಸೀಟು ಹಿಂದಕ್ಕೆ ಪಡೆದರೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದರು. ಈ ನಿಟ್ಟಿನಲ್ಲಿ ಇದೀಗ ಸಚಿವರು ಮನವಿ ಸ್ವೀಕರಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details