ಕರ್ನಾಟಕ

karnataka

ETV Bharat / state

ಯುಜಿಸಿ-ಎನ್​ಇಟಿ ಪರೀಕ್ಷೆ ಪತ್ರಿಕೆಯಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯ ಖಂಡಿಸಿ ಕೇಂದ್ರಕ್ಕೆ ನಾಗಾಭರಣ ಪತ್ರ - ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಟಿ. ಎಸ್ ನಾಗಾಭರಣ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕನ್ನಡ ಐಚ್ಛಿಕ ಭಾಷೆಯ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಿ ಎಲ್ಲ ಕನ್ನಡದ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡದ ವಿದ್ಯಾರ್ಥಿಗಳಿಗೆ ಆದಂತಹ ತೊಂದರೆಯನ್ನು ಖಂಡಿಸುತ್ತದೆ. ಎಂದಿಗೂ ಪ್ರಾಧಿಕಾರ ಕನ್ನಡದ ವಿದ್ಯಾರ್ಥಿಗಳ ಪರವಾಗಿ ಇರುತ್ತದೆ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತದೆ ಎಂದು ತಿಳಿಸಿದ್ದಾರೆ..

T S Nagabarana
ಟಿ. ಎಸ್ ನಾಗಾಭರಣ

By

Published : Dec 28, 2021, 7:39 PM IST

ಬೆಂಗಳೂರು : ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನಡೆಸಿದ ಯುಜಿಸಿ-ಎನ್‌ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳನ್ನು ನೀಡಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಖಂಡಿಸುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್ ನಾಗಾಭರಣ ಪತ್ರ ಬರೆದಿದ್ದಾರೆ.

ರಾಜ್ಯಾದ್ಯಂತ ನೂರಾರು ವಿದ್ಯಾರ್ಥಿಗಳು ಹಲವು ದಿನಗಳಿಂದ ಪರೀಕ್ಷೆ ತಯಾರಿ ಮಾಡಿಕೊಂಡಿರುತ್ತಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಲೋಪದಿಂದ ಕನ್ನಡದ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದಾರೆ. ಪ್ರಶ್ನೆ ಪತ್ರಿಕೆಯಲ್ಲಿ 10 ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು.

ಉಳಿದ 90 ಪ್ರಶ್ನೆಗಳು ಹಿಂದಿ ಭಾಷೆಯಲ್ಲಿರುವುದನ್ನು ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಪ್ರಮಾದಗಳನ್ನು ಮುಂದೆಂದೂ ಆಗದಂತೆ ಯುಜಿಸಿ-ಎನ್‌ಇಟಿ ಸಂಸ್ಥೆ ಅಗತ್ಯ ಕ್ರಮವಹಿಸಬೇಕೆಂದು ಪ್ರಾಧಿಕಾರ ಒತ್ತಾಯಿಸುತ್ತದೆ ಎಂದಿದ್ದಾರೆ.

ಯುಜಿಸಿ-ಎನ್​ಇಟಿ ಪರೀಕ್ಷೆ ಪತ್ರಿಕೆಯಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯ ಖಂಡಿಸಿ ಕೇಂದ್ರಕ್ಕೆ ಪತ್ರ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕನ್ನಡ ಐಚ್ಛಿಕ ಭಾಷೆಯ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಿ ಎಲ್ಲ ಕನ್ನಡದ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡದ ವಿದ್ಯಾರ್ಥಿಗಳಿಗೆ ಆದಂತಹ ತೊಂದರೆಯನ್ನು ಖಂಡಿಸುತ್ತದೆ. ಎಂದಿಗೂ ಪ್ರಾಧಿಕಾರ ಕನ್ನಡದ ವಿದ್ಯಾರ್ಥಿಗಳ ಪರವಾಗಿ ಇರುತ್ತದೆ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಬರೆದಿರುವ ಪತ್ರದ ಸಾರಾಂಶ ಹೀಗಿದೆ..

ಡಿಸೆಂಬರ್ 26ರ ಭಾನುವಾರದಂದು ನಡೆದ ಯುಜಿಸಿ-ಎನ್‌ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ ಆರಂಭದ 10 ಪ್ರಶ್ನೆಗಳು ಕನ್ನಡದಲ್ಲಿದ್ದು, ನಂತರದ 90 ಪ್ರಶ್ನೆಗಳು ಹಿಂದಿ ಭಾಷೆಯಲ್ಲಿ ಬಂದಿರುವುದು ಔದ್ಯೋಗಿಕ ಭವಿಷ್ಯಕ್ಕಾಗಿ ಪರೀಕ್ಷೆ ಬರೆದ ಸಾವಿರಾರು ವಿದ್ಯಾರ್ಥಿಗಳಿಗೆ ನಿರಾಶೆಯನ್ನುಂಟು ಮಾಡಿದೆ.

ಈ ತರಹದ ಭಾಷಾ ಕುಹುಕದ ಕೆಲಸವನ್ನು ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿ, ಅದನ್ನು ತೀವ್ರವಾಗಿ ಖಂಡಿಸುತ್ತದೆ. ಇದು ಕೇವಲ ಯುಜಿಸಿ-ಎನ್‌ಇಟಿ ಸಂಸ್ಥೆಯ ತಾಂತ್ರಿಕ ಲೋಪವಾಗಿರದೆ ದುರುದ್ದೇಶಪೂರಿತ ಭಾಷಾ ಸಾಮರಸ್ಯವನ್ನು ಹಾಳು ಮಾಡುವ ಅಧಿಕಾರಿಗಳ ದಿವ್ಯನಿರ್ಲಕ್ಷ್ಯವಾಗಿರುತ್ತದೆ.

ಅವರ ಬೇಜವಾಬ್ದಾರಿಯಿಂದಾಗಿ ಕನ್ನಡದ ಸಾವಿರಾರು ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದಾರೆ. ರಾಜ್ಯಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಹಲವು ದಿನಗಳಿಂದ ಪರೀಕ್ಷೆ ತಯಾರಿ ಮಾಡಿಕೊಂಡಿದ್ದರು. ಆದರೆ, ಯುಜಿಸಿ-ಎನ್‌ಇಟಿ ಸಂಸ್ಥೆಯ ಬೇಜವಾಬ್ದಾರಿತನದಿಂದಾಗಿ ವಿದ್ಯಾರ್ಥಿಗಳ ಓದಿನ ಜೊತೆಗೆ ಅವರ ಭವಿಷ್ಯವು ಮಂಕಾಗಿದೆ.

ಆದ್ದರಿಂದ, ಕೂಡಲೇ ಈ ಬಗ್ಗೆ ಪರಿಶೀಲಿಸಿ ಸದರಿ ಪರೀಕ್ಷೆಗಳನ್ನು ಮತ್ತೊಮ್ಮೆ ನಡೆಸುವಂತೆ ಹಾಗೂ ಸಂಬಂಧಪಟ್ಟ ಅಧಿಕಾರಿ/ನೌಕರರ ಮೇಲೆ ನಿಯಮಾನುಸಾರ ಕ್ರಮ ಜರುಗಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಖಂಡ ಕನ್ನಡ ಮನಸ್ಸುಗಳ ಪರವಾಗಿ ಒತ್ತಾಯಿಸುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ಓದಿ:ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ : DYSP ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

For All Latest Updates

TAGGED:

ABOUT THE AUTHOR

...view details