ಬೆಂಗಳೂರು:ಸಾರಿಗೆ ನೌಕರರ ಮುಷ್ಕರದ ವೇಳೆ ಕರ್ತವ್ಯಕ್ಕೆ ಹಾಜರಾಗಿದ್ದ ಬಿಎಂಟಿಸಿ ಚಾಲಕನಿಗೆ ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟದ ಸದಸ್ಯನ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯೋರ್ವ ಜೀವ ಬೆದರಿಕೆ ಹಾಕಿರುವ ಕುರಿತು ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಸ್ ಮುಷ್ಕರದ ವೇಳೆ ಕರ್ತವ್ಯಕ್ಕೆ ಹಾಜರಿ: ಚಾಲಕನಿಗೆ ಜೀವ ಬೆದರಿಕೆ, FIR ದಾಖಲು - Transport Workers strike
ಬೆದರಿಕೆ ಹಾಕುವ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ತ್ಯಾಗರಾಜು ಡಿಪೋ ಮೇಲಧಿಕಾರಿಗಳಿಗೆ ತಿಳಿಸಿದ್ದರು. ಇದರ ಅನ್ವಯ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ.

ಬಿಎಂಟಿಸಿ ಚಾಲಕ ತ್ಯಾಗರಾಜು ಬುಧವಾರ ಬೆಳಗ್ಗೆ 7.30ರ ವೇಳೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ವೇಳೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತನ್ನ ಹೆಸರು ನಾಯಕ್, ಸಾರಿಗೆ ನೌಕರರ ಕೂಟದ ಸದಸ್ಯ ಎಂದು ಪರಿಚಯಿಸಿಕೊಂಡ. ಒಕ್ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಅಧ್ಯಕ್ಷ ಚಂದ್ರಶೇಖರ್ ಅವರ ವಿರುದ್ಧ ದೂರು ದಾಖಲಿಸಿರುವುದನ್ನು ಪ್ರಶ್ನಿಸಿದ್ದ. ‘ಏನಾದರೂ ತೊಂದರೆ ಮಾಡಿ, ಅದನ್ನು ನೀನೇ ಮಾಡಿದ್ದಾಗಿ ದೂರು ದಾಖಲಿಸುತ್ತೇನೆ’ ಎಂದು ಹೆದರಿಸಿದ್ದಾಗಿ ಚಾಲಕ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾನೆ.
ಬೆದರಿಕೆ ಹಾಕುವ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ತ್ಯಾಗರಾಜು ಡಿಪೋ ಮೇಲಧಿಕಾರಿಗಳಿಗೆ ತಿಳಿಸಿದ್ದರು. ಇದರ ಅನ್ವಯ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ.