ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ-ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ಚದುರಿದ ಹಾಗೂ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಘಟ್ಟಪ್ರದೇಶದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ - ಹವಮಾನ ಇಲಾಖೆ
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೂರು ದಿನ ಮಳೆ ಸಾಧ್ಯತೆ
ಮೇಲ್ಮೈ ಸುಳಿಗಾಳಿ ಹಾಗೂ ಮೋಡ ವಾತಾವರಣ ನಿರ್ಮಾಣ ಆಗಿರುವುದರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಆದ್ರೆ ಬೆಂಗಳೂರಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಸಾಧಾರಣ ಬೇಸಿಗೆಗಿಂತ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ಉಷ್ಣತೆ ಇದೆ ಎಂದು ಸಿ.ಎಸ್.ಪಾಟೀಲ್ ಹೇಳಿದ್ದಾರೆ.