ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಲೆನಾಡು, ಕರಾವಳಿ ಭಾಗದಲ್ಲಿರುವ ನದಿಗಳು ಉಕ್ಕಿ ಹರಿಯುತ್ತಿವೆ. ಮುಂಗಾರು ಮಳೆ ಹಲವು ಅಣೆಕಟ್ಟುಗಳನ್ನು ತುಂಬಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಯಾವ ಯಾವ ಅಣೆಕಟ್ಟುಗಳಲ್ಲಿ ಸದ್ಯ ಎಷ್ಟು ಪ್ರಮಾಣದಲ್ಲಿ ನೀರಿದೆ ಎಂಬುದರ ವಿವರವಾದ ಮಾಹಿತಿ ಇಲ್ಲಿದೆ.
ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹವಾಮಾನ ಏರಿಳಿತದಿಂದಾಗಿ ರಾಜ್ಯದಲ್ಲಿ ಜುಲೈ 30 ರವರೆಗೆ ಮತ್ತೆ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಅಬ್ಬರಿಸಿದ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿ ಸಿಲುಕಿ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಮ್ಮೆ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿ ಸೋಮವಾರ ತುಸು ತೀವ್ರಗೊಂಡಿದೆ. ಇದರ ತೀವ್ರತೆ ಜು.28ರಂದು ಮತ್ತಷ್ಟು ಹೆಚ್ಚಾಗಿ ಬಂಗಾಳ ಕೊಲ್ಲಿಯಲ್ಲಿ ಉತ್ತರ ಭಾಗದಲ್ಲಿ ವಾಯುಭಾರ ಸೃಷ್ಟಿಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:ಪೊಲೀಸರು ಆರೋಪಿಗಳಿಗೆ ಶೂಟ್ ಮಾಡಿದ್ರೆ ಇನ್ಮುಂದೆ ಎಕ್ಸ್ ರೇ ರಿಪೋರ್ಟ್ ಕೊಡಬೇಕು