ಬೆಂಗಳೂರು:ರಾಜ್ಯಾದ್ಯಂತ ಮೊಟ್ಟೆ ಹಾಗೂ ಮಾಂಸದ ಅಂಗಡಿಗಳನ್ನು ತೆರೆಯುವಂತೆ ಕ್ರಮ ವಹಿಸಲು ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಲಾಕ್‌ಡೌನ್ ನಡುವೆಯೂ ಸಿಗಲಿದೆ ಮೊಟ್ಟೆ, ಮಾಂಸ!
ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ದೃಷ್ಟಿಯಿಂದ ರಾಜ್ಯದಾದ್ಯಂತ ಮಾಂಸದಂಗಡಿಗಳನ್ನು ಮುಚ್ಚಿಸಲಾಗಿತ್ತು. ಇನ್ನು ಮುಂದೆ ರಾಜ್ಯದಾದ್ಯಂತ ಮೊಟ್ಟೆ ಹಾಗೂ ಮಾಂಸದ ಅಂಗಡಿಗಳನ್ನು ತೆರೆಯುವಂತೆ ಕ್ರಮ ವಹಿಸಲು ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಲಾಕ್ ಡೌನ್: ರಾಜ್ಯದಲ್ಲಿ ಮೊಟ್ಟೆ, ಮಾಂಸದ ಅಂಗಡಿ ತೆರಯಲು ಸೂಚನೆ
ಲಾಕ್ಡೌನ್ನಿಂದ ಮೊಟ್ಟೆ, ಕುರಿ, ಕೋಳಿ, ಮೇಕೆ ಮಾಂಸದ ಮಾರಾಟಕ್ಕೆ ವಿನಾಯಿತಿ ನೀಡಲಾಗಿರುತ್ತದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಮೊಟ್ಟೆ, ಕುರಿ, ಕೋಳಿ, ಮೇಕೆ ಮಾಂಸ ಮಾರಾಟ ಅಂಗಡಿಗಳನ್ನು ತರೆಯುವಂತೆ ಸೂಚನೆ ನೀಡಲಾಗಿದೆ.
ಆ ಮೂಲಕ ಗ್ರಾಹಕರಿಗೆ ಮೊಟ್ಟೆ, ಮಾಂಸ ಲಭ್ಯವಾಗುವ ನಿಟ್ಟಿನಲ್ಲಿ ಕ್ರಮ ವಹಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.