ಕರ್ನಾಟಕ

karnataka

ETV Bharat / state

ಕೋವಿಡ್ ನಿಯಂತ್ರಣಕ್ಕೆ ಲಾಕ್​ಡೌನ್​​ ಒಂದೇ ಪರಿಹಾರವಲ್ಲ: ಡಿಸಿಎಂ ಅಶ್ವತ್ಥ್​​ ನಾರಾಯಣ - DCM Ashwathth Narayana

ಸಚಿವ ಡಾ ಸುಧಾಕರ್ ಅವರು ಕ್ವಾರಂಟೈನ್ ನಲ್ಲಿರುವ ಕಾರಣ ಇದರ ಜವಾಬ್ದಾರಿಯನ್ನು ಸಚಿವ ಅಶೋಕ್ ಅವರಿಗೆ ವಹಿಸಲಾಗಿದೆ. ಇದರಲ್ಲಿ ವಿಶೇಷ ಏನೂ ಇಲ್ಲ. ಎಲ್ಲಾ ಶಾಸಕರು, ಸಚಿವರು ಹಾಗೂ ಅಧಿಕಾರಿಗಳು ಕೋವಿಡ್ ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ್​​ ನಾರಾಯಣ ತಿಳಿಸಿದರು.

DCM Ashwathth Narayana
ಡಿಸಿಎಂ ಅಶ್ವತ್ಥ್​​ ನಾರಾಯಣ

By

Published : Jun 26, 2020, 3:58 PM IST

ಬೆಂಗಳೂರು: ಕೊರೊನಾ ಬಂದ ನಂತರ ರಾಜ್ಯದಲ್ಲಿ ಸಾಕಷ್ಟು ಬಾರಿ ಲಾಕ್​ಡೌನ್​ನ್ನು ಮಾಡಲಾಗಿದೆ. ಇದು ಪ್ರಾರಂಭದ ಹಂತದಲ್ಲಿ ಜನರಿಗೆ ಪ್ರಾಥಮಿಕ ಸೌಲಭ್ಯವನ್ನು ರೂಪಿಸಲು ಅಗತ್ಯವಿತ್ತು. ಈಗ ಅದರ ಅಗತ್ಯವಿಲ್ಲವೆಂದು ಡಿಸಿಎಂ ಡಾ. ಅಶ್ವತ್ಥ್​​ ನಾರಾಯಣ ತಿಳಿಸಿದರು.

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಪಕ್ಷಗಳು ನೀಡುವ ಸಲಹೆಗಳನ್ನು ಸ್ವೀಕರಿಸುತ್ತೇವೆ. ಆದರೆ ಅವರವರ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ ಎಂದರು.

ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್​ ಒಂದೇ ಪರಿವಾರವಲ್ಲವೆಂದ​ ಡಿಸಿಎಂ

ಕ್ಲಸ್ಟರ್​ಗಳು ಹಾಗೂ ಪ್ರದೇಶಕ್ಕೆ ಸೀಮಿತವಾಗಿ ಕಂಟೇನ್​ಮೆಂಟ್​​ ಮಾಡಲಾಗುತ್ತಿದೆ. ಕೊರೊನಾ ಸೋಂಕಿತರಿಗೆ ಬೆಡ್​ಗಳ ಸಮಸ್ಯೆ ಇಲ್ಲ. ಸುಮಾರು 6000 ಬೆಡ್​ಗಳನ್ನು ಈಗಾಗಲೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆಯನ್ನು ಸಚಿವ ಅಶೋಕ್ ಅವರಿಗೆ ನೀಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಸಚಿವ ಡಾ. ಸುಧಾಕರ್ ಅವರು ಕ್ವಾರಂಟೈನ್ ನಲ್ಲಿರುವ ಕಾರಣ ಇದರ ಜವಾಬ್ದಾರಿ ಅಶೋಕ್ ಅವರಿಗೆ ವಹಿಸಲಾಗಿದೆ. ಇದರಲ್ಲಿ ವಿಶೇಷತೆ ಏನೂ ಇಲ್ಲ. ಎಲ್ಲಾ ಶಾಸಕರು, ಸಚಿವರು ಹಾಗೂ ಅಧಿಕಾರಿಗಳು ಕೋವಿಡ್ ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ABOUT THE AUTHOR

...view details