ಬೆಂಗಳೂರು: ಲೋಕಾಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಪೊಲೀಸ್ ಸಿಬ್ಬಂದಿ ಯಾವುದೆ ರಾಜಕಾರಣಿಗಳ ಮಾತು ಕೇಳಕೂಡದು. ತಪ್ಪು ಮಾಡಿದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಾಂತರ ಎಸ್ಪಿ ರಾಮ್ ನಿವಾಸ್ಖಡಕ್ ಸೂಚನೆ ನೀಡಿದ್ದಾರೆ.
ಲೋಕಾಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ನಾಯಕರು ತಮ್ಮ ತಮ್ಮ ಪಕ್ಷದ ನಾಯಕರ ಗೆಲುವಿಗಾಗಿ ಪ್ರಚಾರ ಕೈಗೊಂಡಿದ್ದಾರೆ. ಆದರೆ ಚುನಾವಣೆ ನಡೆಯವ ಮುಂಚೆ ಹಾಗೂ ಚುನಾವಣೆ ನಡೆಯುವ ವೇಳೆ ಬಹಳಷ್ಟು ಮುಂಜಾಗೃತ ಕ್ರಮ ಬೇಕಾಗುತ್ತದೆ. ಅದಕ್ಕಾಗಿ ಈಗಾಗಲೇ ರಾಜ್ಯ ಹಾಗೂ ಬೆಂಗಳೂರಿನಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅಷ್ಟೇ ಅಲ್ಲದೇ ಗುಪ್ತಚರ ಇಲಾಖೆ ಕೂಡ ಪ್ರತಿಯೊಂದು ಚಲನವಲನಗಳ ಮಾಹಿತಿಯನ್ನು ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ರವಾನೆ ಮಾಡುತ್ತಿದ್ದಾರೆ.
ಅದರಲ್ಲೂ ಬಹಳ ಸೂಕ್ಷ ಹಾಗೂ ಜಾಸ್ತಿ ಜನಸಾಂದ್ರತೆ ಇರುವ ಸಿಲಿಕಾನ್ ಸಿಟಿಗೆ ಬೆಂಗಳೂರು ಚುನಾವಣಾಧಿಕಾರಿಗಳ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳ ಸಾರಥ್ಯದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲೆಡೆ ಅಲರ್ಟ್‌ಆಗಿದ್ದಾರೆ.