ಬೆಂಗಳೂರು: ಎಸ್ಪಿಯಾಗಿ ಕಾರ್ಯನಿರ್ವಹಿಸುವಾಗ ಅಕ್ರಮ ಆಸ್ತಿ ಗಳಿಕೆ ಸಾಬೀತು ಹಿನ್ನೆಲೆಯಲ್ಲಿ ಶ್ರೀನಿವಾಸ್ ಐಯ್ಯರ್ಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ಒಂದು ಕೋಟಿ ರೂಪಾಯಿ ದಂಡ ವಿಧಿಸಿ 77ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.
ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯ ಎಸ್ಪಿಯಾಗಿ ಶ್ರೀನಿವಾಸ್ 2007ರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ತಮ್ಮ ಆದಾಯ ಮೂಲಗಳಿಗಿಂತ ಶೇ.53ರಷ್ಟು ಆಸ್ತಿ ಸಂಪಾದನೆ ಮಾಡಿರುವುದು ದಾಳಿ ವೇಳೆ ಕಂಡುಬಂದಿತ್ತು.