ಬೆಂಗಳೂರು :ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿ 31 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಂಸ್ಥೆ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಬೆಡ್ ಬ್ಲಾಕಿಂಗ್ ಪ್ರಕರಣ.. 31 ಅಧಿಕಾರಿಗಳ ವಿರುದ್ಧ ಸುಮೋಟೊ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ - ಬಿಬಿಎಂಪಿ ನಿರ್ವಾಹಕರು
ಮೂರು ವಾರದೊಳಗೆ ಬೆಡ್ ಬ್ಲಾಕಿಂಗ್ ಸಂಬಂಧಿಸಿದ ವರದಿಗಳನ್ನು ಅಧಿಕಾರಿಗಳು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಸೂಚಿಸಿದ್ದಾರೆ. ಜೂನ್ 1ಕ್ಕೆ ಪ್ರಕರಣದ ಬಗ್ಗೆ ವಿಚಾರಣೆ ನಡೆಯಲಿದೆ..
ಲೋಕಾಯುಕ್ತ
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮೆಡಿಕಲ್ ಎಜುಕೇಶನ್ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ನಿರ್ವಾಹಕರು, ಬಿಬಿಎಂಪಿ ಮುಖ್ಯ ಆಯುಕ್ತರು ಸೇರಿ ಪ್ರಕರಣಕ್ಕೆ ಸಂಬಂಧಿಸಿದ 31 ಅಧಿಕಾರಿಗಳ ವಿರುದ್ಧ ಸುಮೋಟೊ ದಾಖಲಿಸಿದ್ದಾರೆ.
ಮೂರು ವಾರದೊಳಗೆ ಬೆಡ್ ಬ್ಲಾಕಿಂಗ್ ಸಂಬಂಧಿಸಿದ ವರದಿಗಳನ್ನು ಅಧಿಕಾರಿಗಳು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಸೂಚಿಸಿದ್ದಾರೆ. ಜೂನ್ 1ಕ್ಕೆ ಪ್ರಕರಣದ ಬಗ್ಗೆ ವಿಚಾರಣೆ ನಡೆಯಲಿದೆ.