ಬೆಂಗಳೂರು: ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು, ಈ ಸಂಬಂಧ ಕಂಪನಿಯ ಉಪಾಧ್ಯಕ್ಷ, ರಿಚರ್ಡ್ ಎಫ್. ಎಂಬ್ರೋಸ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿ ಹೂಡಿಕೆಗೆ ಮುಂದಾದ ಲಾಕೀಡ್ ಮಾರ್ಟಿನ್ ಕಂಪನಿ: ಸಿಎಂಗೆ ಬಂತು ಪತ್ರ - ಲಾಕೀಡ್ ಮಾರ್ಟಿನ್ ನ ರಿಚರ್ಡ್ ಎಫ್ ಎಂಬ್ರೋಜ್ ಸಿಎಂಗೆ ಪತ್ರ
ಏರೋಸ್ಪೇಸ್ ವಲಯದ ಲಾಕೀಡ್ ಮಾರ್ಟಿನ್ ಕಂಪನಿ ಕರ್ನಾಟಕದಲ್ಲಿ ಬಂಡವಾಳ ಹೂಡುವ ಸಲುವಾಗಿ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅವರು, “ಲಾಕೀಡ್ ಮಾರ್ಟಿನ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ರಿಚರ್ಡ್ ಎಫ್ ಎಂಬ್ರೋಜ್ ಬರೆದ ಪತ್ರ ಇಂದು ತಲುಪಿದೆ. ಮೇಲ್ನೊಟಕ್ಕೆ ಇದೊಂದು ಸಾಮಾನ್ಯ ಪತ್ರವೆನಿಸಿದರೂ ಅದರ ಗಹನತೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಲಾಕೀಡ್ ಮಾರ್ಟಿನ್ ಅಮೆರಿಕದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು, ಅದು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ದಾವೋಸ್ ಭೇಟಿ ಫಲಪ್ರದವಾಗಿದೆ ಎಂದು ಹೇಳಲು ಇದು ಒಂದು ಉದಾಹರಣೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಪತ್ರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸುವ ಬಗ್ಗೆ ನಮ್ಮ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಇದಲ್ಲದೆ ನಮ್ಮ ದಾವೋಸ್ ಭೇಟಿ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆ ಇದು ಉತ್ತರವಾಗಿದೆ. ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿ.ಐ.ಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ ಎಂದು ಸಿಎಂ ತಿಳಿಸಿದ್ದಾರೆ.