ಬೆಂಗಳೂರು: ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇತ್ತ ಚಿತಾಗಾರದ ಬಳಿ ಆ್ಯಂಬುಲೆನ್ಸ್ಗಳು ಸಾಲುಗಟ್ಟಿ ನಿಲ್ಲುತ್ತಿವೆ. ನಗರದ ಸುಮನಹಳ್ಳಿ ಚಿತಾಗಾರದೊಳಗೆ ಕೋವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸರದಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ.
ಕೋವಿಡ್ನಿಂದ ಮೃತಪಟ್ಟವವರ ಶವ ತಂದಿರುವ 7 ಆ್ಯಂಬುಲೆನ್ಸ್ಗಳು ನಿಂತಿರುವುದು ಕಂಡುಬರುತ್ತಿದೆ. ನಿನ್ನೆ ಮಧ್ಯರಾತ್ರಿಯಿಂದ ಅಂತ್ಯಕ್ರಿಯೆ ನಡೆಸುತ್ತಿರುವ ಚಿತಾಗಾರದ ಸಿಬ್ಬಂದಿ ಒಟ್ಟು 40 ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.