ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಯುವಕರು ಪಾರು - ಬೆಂಗಳೂರಲ್ಲಿ ಅಪಘಾತ , ಇಬ್ಬರು ಯುವಕರು ಅಪಘಾತದಿಂದ ಪಾರು
ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಾ.29ರಂದು ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಸಿಂಗಾಪುರ ಲೇಔಟ್‌ನಲ್ಲಿ ನಡೆದಿದ್ದು ವಿಡಿಯೋ ಲಭ್ಯವಾಗಿದೆ.
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಘಟನೆ ಯಲಹಂಕದ ಸಿಂಗಾಪುರ ಲೇಔಟ್‌ನಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯ ಇಲ್ಲಿದೆ.