ಕರ್ನಾಟಕ

karnataka

ETV Bharat / state

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತವಾದ ಪರಿಣಾಮ, ಕರ್ನಾಟಕದಲ್ಲಿ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಹೇಳಿದ್ದಾರೆ.

Low pressure in the South of Bey of Bengal
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

By

Published : Mar 6, 2022, 5:08 PM IST

ಬೆಂಗಳೂರು: ರಾಜ್ಯದ ಹಲವು ಕಡೆ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರಾದ ಸದಾನಂದ ಅಡಿಗ ಹೇಳಿದ್ದಾರೆ.

ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತವಾದ ಪರಿಣಾಮ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದಿದ್ದಾರೆ.

ಇದನ್ನೂ ಓದಿ:ತುಮಕೂರು: ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details