ಕರ್ನಾಟಕ

karnataka

ETV Bharat / state

ಮಾಡಾಳ್‌ ಪ್ರಕರಣ: ಆಟೋಮಾಸ್ ಕಂಪನಿಯ ಪಾಲುದಾರರಿಗೆ ನಿರೀಕ್ಷಣಾ ಜಾಮೀನು - ಈಟಿವಿ ಭಾರತ ಕನ್ನಡ

ಪ್ರಶಾಂತ್​ಗೆ ಮಾಡಾಳ್ ಅವರಿ​ಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಆಟೋಮಾಸ್ ಕಂಪನಿಯ ಪಾಲುದಾರರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.

ನಿರೀಕ್ಷಣಾ ಜಾಮೀನು ಮಂಜೂರು
ನಿರೀಕ್ಷಣಾ ಜಾಮೀನು ಮಂಜೂರು

By

Published : Mar 30, 2023, 7:12 AM IST

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ‌‌ನವರ ಪುತ್ರ ಪ್ರಶಾಂತ್ ಮಾಡಾಳ್​ಗೆ ಲಂಚ ನೀಡಿದ ಆರೋಪ ಸಂಬಂಧ ಕರ್ನಾಟಕ ಆಟೋಮಾಸ್ ಕಂಪನಿ ಪಾಲುದಾರರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಂಪನಿಯ ಪಾಲುದಾರರಾದ ಕೈಲಾಶ್‌ ಎಸ್‌.ರಾಜ್‌, ವಿನಯ್‌ ಎಸ್‌. ರಾಜ್‌ ಮತ್ತು ಚೇತನ್‌ ಮರೈಚಾ ಹಾಗೂ ಕಂಪನಿಯ ವ್ಯವಸ್ಥಾಪಕ ದೀಪಕ್‌ ಡಿ. ಜಾಧವ್ ಅವರಿಗೆ ಜಾಮೀನು ದೊರೆತಿದೆ. ನಾಲ್ವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳನ್ನ‌ು ಕೈಗೆತ್ತಿಕೊಂಡ ನ್ಯಾಯಾಧೀಶ ಲಕ್ಷ್ಮೀನಾರಾಯಣ್ ಭಟ್, ವಿಚಾರಣೆ ನಡೆಸಿ ಜಾಮೀನು ಅರ್ಜಿಗಳನ್ನು ಪುರಸ್ಕರಿಸಿತು. ಇದೇ ವೇಳೆ, 5 ಲಕ್ಷ ರೂ. ಮೊತ್ತದ ಬಾಂಡ್, ಸಾಕ್ಷಿಗಳ ಮೇಲೆ ಪ್ರಭಾವ ಬೀರಕೂಡದು ಹಾಗೂ ತನಿಖೆ ಸಹಕರಿಸಬೇಕು‌ ಎಂದು ಷರತ್ತು ವಿಧಿಸಿದೆ.

ಟೆಂಡರ್ ವಿಚಾರವಾಗಿ ಪ್ರಶಾಂತ್ ಮಾಡಾಳ್ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದು, ಸ್ಥಳದಲ್ಲೇ‌ ಆಟೊಮಾಸ್ ಕಂಪನಿಯ ಇಬ್ಬರು ನೌಕರರು ಉಪಸ್ಥಿತರಿದ್ದರು. ಇವರನ್ನು ವಿಚಾರಣೆ ನಡೆಸಿದ್ದ ಪೊಲೀಸರು ಬಳಿಕ ಬಂಧಿಸಿದ್ದರು. ತನಿಖೆ ವೇಳೆ‌ ಕಂಪನಿಯ ಪಾಲುದಾರರು ಅವ್ಯವಹಾರದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದು ಬಂಧನ ಭೀತಿ ಎದುರಾಗಿತ್ತು. ಹೀಗಾಗಿ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ಹಿನ್ನೆಲೆ:ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್​ಡಿಎಲ್‌) ರಾಸಾಯನಿಕ ವಸ್ತುಗಳನ್ನು ಪೂರೈಸುವ ಟೆಂಡರ್ ನೀಡಲು ಆಗ ಕೆಎಸ್​ಡಿಎಲ್‌ ಅಧ್ಯಕ್ಷರಾಗಿದ್ದ ಹಾಗೂ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮಾಡಾಳ್ ಟೆಂಡರ್ ಆಕಾಂಕ್ಷಿಯೊಬ್ಬರಿಂದ 80 ಲಕ್ಷ ರೂ ಹಣಕ್ಕೆ ಬೇಡಿಕೆಯಿಟ್ಟು 40 ಲಕ್ಷ ರೂ ಸ್ವೀಕರಿಸುತ್ತಿದ್ದಾಗ ಅವರ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಪ್ರಕರಣದಲ್ಲಿ ಮಾಡಾಳ್​ ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದರು. ತದನಂತರ ಶಾಸಕರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿತ್ತು. ಆ ಬಳಿಕ ಪ್ರಕರಣದ ಮೊದಲ ಆರೋಪಿಯಾಗಿರುವ ಅರ್ಜಿದಾರರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅತ್ಯಗತ್ಯವಾಗಿದೆ ಎಂದು ನ್ಯಾಯಾಲಯ ನಿರೀಕ್ಷಣಾ ಜಾಮೀನು ವಜಾಗೊಳಿಸಿತ್ತು.

ಇದನ್ನೂ ಓದಿ:ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ

ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ತುಮಕೂರು ಜಿಲ್ಲೆಯ ಕ್ಯಾತಸಂದ್ರ ಟೋಲ್ ಬಳಿ ಬಂಧಿಸಿದ್ದರು. ಅದೇ ದಿನ ಮಾಡಾಳ್ ಸ್ವ ಗ್ರಾಮ ಚನ್ನೇಶಪುರದಲ್ಲಿಯ ನಿವಾಸಕ್ಕೆ ಇಬ್ಬರು ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಿವಾಸದ ಕೋಣೆಗಳನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಿದ್ದರು.

ಇದನ್ನೂ ಓದಿ:ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ನಿವಾಸಕ್ಕೆ ಬಂದ ಲೋಕಾಯುಕ್ತ ಅಧಿಕಾರಿಗಳು

ಮಾ.28ರಂದು ಮಾಡಾಳ್​ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರ ಪರ ಸಂತೋಷ್ ನಗರಾಳೆ, ಆರೋಪಿತ ಸ್ಥಾನದಲ್ಲಿರುವ ಮಾಡಾಳ್ ಅವರನ್ನು ಹೆಚ್ಚಿನ ವಿಚಾರಣೆಗೊಳಪಡಿಸಬೇಕು‌. ಹೀಗಾಗಿ 10 ದಿನಗಳ ಕಾಲ‌ ಪೊಲೀಸ್ ವಶಕ್ಕೆ ನೀಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಲೋಕಾ‌ಯುಕ್ತ ಪೊಲೀಸರು ಮನವಿ ಮಾಡಿಕೊಂಡಿದ್ದರು.‌

ಇದನ್ನೂ ಓದಿ:ಮಾಡಾಳ್ ವಿರೂಪಾಕ್ಷಪ್ಪ ಐದು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ: ವಿಶೇಷ ನ್ಯಾಯಾಲಯ ಆದೇಶ

ABOUT THE AUTHOR

...view details