ಬೆಂಗಳೂರು:ರಾಜ್ಯಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕ (ಒಬಿಸಿ)ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.
2021ರ ಜುಲೈ ತಿಂಗಳಲ್ಲಿ ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಧು ಬಂಗಾರಪ್ಪಗೆ ಪಕ್ಷದಲ್ಲೀಗ ಪ್ರಮುಖ ಸ್ಥಾನಮಾನ ಲಭಿಸಿದೆ. ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಸೊರಬ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಧು ಬಂಗಾರಪ್ಪ ಕಳೆದ ಚುನಾವಣೆಯಲ್ಲಿ ತಮ್ಮ ಸಹೋದರ ಕುಮಾರ ಬಂಗಾರಪ್ಪ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು.