ಬೆಂಗಳೂರು: ಅನಾರೋಗ್ಯದಿಂದ ಮೃತಪಟ್ಟಿದ್ದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ಇಂದು ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದಿವಂಗತ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಜನ್ಮದಿನ ಆಚರಣೆ - An IPS officer Madhukar shetty who died of illness
ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಹೆಚ್1 ಎನ್1 ಸೋಂಕಿನಿಂದ ಬಳಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಮಧುಕರ್ ಶೆಟ್ಟಿಯವರೊಂದಿಗೆ ಕಾರ್ಯನಿರ್ವಹಿಸಿದ್ದ ಪ್ರಾದೇಶಿಕ ಆಯುಕ್ತ ಹರ್ಷಗುಪ್ತಾ, ಹಿರಿಯ ಐಪಿಎಸ್ ಅಧಿಕಾರಿಗಳಾದ ಅಬ್ದುಲ್ ಅಹಾದ್, ಡಿ.ದೇವರಾಜ್, ದಿವಂಗತ ಮಧುಕರ್ ಶೆಟ್ಟಿ ಅವರ ಪತ್ನಿ ಸುವರ್ಣ ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮಧುಕರ್ ಶೆಟ್ಟಿ, ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಹೆಚ್1 ಎನ್1 ಸೋಂಕಿನಿಂದ ಬಳಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಮೂಲತಃ ಉಡುಪಿಯವರಾದ ಇವರು, 1999 ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಲೋಕಾಯುಕ್ತ ಸೇರಿದಂತೆ ಹಲವೆಡೆ ತನ್ನ ದಕ್ಷ ಸೇವೆ ಸಲ್ಲಿಸಿದ್ದರು.