ಬೆಂಗಳೂರು: ರಾಯಚೂರು ಜಿಲ್ಲೆ ನವೋದಯ ಮೆಡಿಕಲ್ ಕಾಲೇಜು ಪ್ರವೇಶ ಸಂಬಂಧ ಕಲ್ಯಾಣ ಕರ್ನಾಟಕ ಭಾಗದ 371(ಜೆ) ಅಡಿ ಮೀಸಲಾತಿ ಆದೇಶ ಪಾಲನೆಗೆ ಹೈಕೋರ್ಟ್ ತಡೆಯಾಜ್ಞೆ ಕೊಟ್ಟಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಹೇಳಿದರು.
ಶೂನ್ಯ ವೇಳೆ ಬಿಜೆಪಿ ಸದಸ್ಯ ಡಾ.ಶಿವರಾಜ್ ಪಾಟೀಲ್ ವಿಷಯ ಪ್ರಸ್ತಾಪಿಸಿ, 371(ಜೆ) ಅಡಿಯಲ್ಲಿ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಪ್ರವೇಶ ಸಿಗುತ್ತಿಲ್ಲ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಲೋಪದೋಷವಿದ್ದರೆ ಸರಿಪಡಿಸಬೇಕು. ಅಥವಾ ಸುಗ್ರೀವಾಜ್ಞೆಗೆ ಜಾರಿಗೆ ತಂದಾದರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.