ಬೆಂಗಳೂರು/ಬೆಳಗಾವಿ: ಮಹಾರಾಷ್ಟ್ರದ ಗಡಿ ಕ್ಯಾತೆ ಬಗ್ಗೆ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ವಿಧಾನಸಭೆಯಲ್ಲಿ ನಿರ್ಧಾರ ಮಾಡಲಾಯಿತು. ಎಲ್ಲರೂ ಒಪ್ಪುವುದಾದರೆ ಉತ್ತರ ಕೊಡುವ ಸಂದರ್ಭದಲ್ಲಿ ಎರಡು ಸದನದಲ್ಲಿ ಖಂಡನಾ ನಿರ್ಣಯ ಮಂಡನೆ ಮಾಡೋಣ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದರು.
ನಿಯಮ 69 ಅಡಿಯಲ್ಲಿ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಎಲ್ಲರೂ ಒಪ್ಪುವುದಾದರೆ ಉತ್ತರ ಕೊಡುವ ಸಂದರ್ಭದಲ್ಲಿ ಎರಡು ಸದನದಲ್ಲಿ ನಿರ್ಣಯ ಮಂಡನೆ ಮಾಡೋಣ ಎಂದರು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದರು.