ಕರ್ನಾಟಕ

karnataka

ETV Bharat / state

ನಿಗದಿತ ಸಮಯದಲ್ಲಿ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ ಭರವಸೆ - ಸಿಎಂ ಬೊಮ್ಮಾಯಿ ಭರವಸೆ

ಮಾಜಿ ಸಂಸದ ಪ್ರಭಾಕರ ಕೋರೆ ಅವರ ನೇತೃತ್ವದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರೈತ ಮುಖಂಡರ ನಿಯೋಗ ರೇಸ್ ಕೋರ್ಸ್ ರಸ್ತೆ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಈ ವೇಳೆ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮಂಜೂರು ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

CM Bommai reacts on Mahalakshmi Eta Irrigation Project
ಚಿಕ್ಕೋಡಿ ರೈತ ಮುಖಂಡರ ನಿಯೋಗದಿಂದ ಸಿಎಂ ಭೇಟಿ

By

Published : Sep 14, 2022, 7:28 AM IST

ಬೆಂಗಳೂರು:ನಿಗದಿತ ಸಮಯದಲ್ಲಿ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕೋಡಿ ರೈತರಿಗೆ ಭರವಸೆ ನೀಡಿದರು.

ಮಾಜಿ ಸಂಸದ ಪ್ರಭಾಕರ ಕೋರೆ ಅವರ ನೇತೃತ್ವದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರೈತ ಮುಖಂಡರ ನಿಯೋಗ ರೇಸ್ ಕೋರ್ಸ್ ರಸ್ತೆ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿತು. ಈ ವೇಳೆ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮಂಜೂರು ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಚಿಕ್ಕೋಡಿ ರೈತ ಮುಖಂಡರ ನಿಯೋಗದಿಂದ ಸಿಎಂ ಭೇಟಿ

ಈ ವೇಳೆ ಮಾತನಾಡಿದ ಸಿಎಂ, ಚಿಕ್ಕೋಡಿಯ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗೆ ಸುಮಾರು 10-12 ವರ್ಷಗಳಿಂದ ಬೇಡಿಕೆ ಇತ್ತು. ಸಕ್ಕರೆ ಕಾರ್ಖಾನೆಗಳಿರುವ ಚಿಕ್ಕೋಡಿಯ ಕೆಲವು ಗ್ರಾಮಗಳಿಗೆ ಏತ ನೀರಾವರಿ ಅಗತ್ಯವಿತ್ತು. ಈ ಭಾಗದ ರೈತರಿಗೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದ ಈ ಯೋಜನೆಯನ್ನು ಮಂಜೂರು ಮಾಡಲಾಗಿದೆ ಎಂದರು.

ಶಾಸಕ ಅರವಿಂದ ಬೆಲ್ಲದ್ , ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details