ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಬೈ ಎಲೆಕ್ಷನ್ ಹಿನ್ನೆಲೆ ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯುತ್ತಿದೆ. ರಾಜಾಜಿನಗರದ ಬಿಬಿಎಂಪಿ ಕಚೇರಿಯಲ್ಲಿ ನಡೆಯುತ್ತಿದ್ದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಉಪಚುನಾವಣೆಗೆ ಒಟ್ಟು - 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಉಪಚುನಾವಣೆ : ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ - ಮಹಾಲಕ್ಷ್ಮಿ ಲೇಔಟ್ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಬೈ ಎಲೆಕ್ಷನ್ ಹಿನ್ನೆಲೆ ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯುತ್ತಿದೆ. ರಾಜಾಜಿನಗರದ ಬಿಬಿಎಂಪಿ ಕಚೇರಿಯಲ್ಲಿ ನಡೆಯುತ್ತಿದ್ದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಉಪಚುನಾವಣೆಗೆ ಒಟ್ಟು - 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
![ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಉಪಚುನಾವಣೆ : ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ](https://etvbharatimages.akamaized.net/etvbharat/prod-images/768-512-5109859-thumbnail-3x2-bng.jpg)
ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
ಮಹಾಲಕ್ಷ್ಮಿ ಲೇಔಟ್ ಚುನಾವಣಾಧಿಕಾರಿ ಆಶಾ.ಎಸ್ 11 ಗಂಟೆಯಿಂದ ನಾಮಪತ್ರ ಪರಿಶೀಲಿಸುತ್ತಿದ್ದಾರೆ. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ 26 ನಾಮಪತ್ರ ಸಲ್ಲಿಕೆಯಾಗಿದೆ.
- ಬಿಜೆಪಿಯಿಂದ- ಗೋಪಾಲಯ್ಯ 4 ನಾಮಪತ್ರ
- ಬಿಜೆಪಿಯಿಂದ - ಹೇಮಲತಾ ಗೋಪಾಲಯ್ಯ 2 ನಾಮಪತ್ರ
- ಕಾಂಗ್ರೆಸ್ನಿಂದ - ಎಮ್.ಶಿವರಾಜ್ 4 ನಾಮಪತ್ರ
- ಜೆಡಿಎಸ್ನಿಂದ - ಡಾ.ಗಿರೀಶ್.ಕೆ ನಾಶಿ 3 ನಾಮಪತ್ರ
- ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ - ವಾಟಾಳ್ ನಾಗರಾಜ್ 1 ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಪರಿಶೀಲನೆ ವೇಳೆ ಮೂವರಿಗೆ ಚುನಾವಣಾಧಿಕಾರಿ ಕಚೇರಿಗೆ ಪ್ರವೇಶವಿದ್ದು, ಅಭ್ಯರ್ಥಿ, ಅಭ್ಯರ್ಥಿಪರ ಏಜೆಂಟ್, ಅಭ್ಯರ್ಥಿಪರ ವಕೀಲರಿಗೆ ಮಾತ್ರ ಅವಕಾಶ ನೀಡಲಾಗಿದೆ.