ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಮಹೇಶ್ ಕುಮಠಳ್ಳಿ ಇಂದು ಅಧಿಕಾರ ಸ್ವೀಕರಿಸಿದರು.
ಶೇಷಾದ್ರಿಪುರಂನಲ್ಲಿರುವ ಮಂಡಳಿ ಕಚೇರಿಯಲ್ಲಿ ಲಾಕ್ಡೌನ್ ಹಿನ್ನಲೆಯಲ್ಲಿ ಸರಳವಾಗಿ ಪೂಜೆ ನೆರವೇರಿಸಿದ ಮಹೇಶ್ ಕುಮಠಳ್ಳಿ ಅಧಿಕಾರ ಸ್ವೀಕಾರ ಮಾಡಿದರು. ಸ್ನೇಹಿತನ ಪದಗ್ರಹಣ ಸಮಾರಂಭದ ವೇಳೆ ಹಾಜರಿದ್ದ ಸಚಿವ ರಮೇಶ್ ಜಾರಕಿಹೊಳಿ ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿ ಶುಭ ಕೋರಿದರು.