ಬೆಂಗಳೂರು:ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಎಂ. ಮಹೇಶ್ವರ್ ರಾವ್ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆ ಪ್ರ. ಕಾರ್ಯದರ್ಶಿಯಾಗಿ ಮಹೇಶ್ವರ್ ರಾವ್ ವರ್ಗಾವಣೆ - Revenue Department Secretary
ಕಂದಾಯ ಇಲಾಖೆಯ ಹೆಚ್ಚುವರಿ ಹೊಣೆ ಹೊತ್ತಿದ್ದ, ಮಂಜುನಾಥ್ ಪ್ರಸಾದ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಎಂ. ಮಹೇಶ್ವರ್ ರಾವ್ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಎಂ.ಮಹೇಶ್ವರ್ ರಾವ್
ಬಿಬಿಎಂಪಿ ಆಯುಕ್ತರಾಗಿ ವರ್ಗಾವಣೆಗೊಂಡಿರುವ ಮಂಜುನಾಥ್ ಪ್ರಸಾದ್ ಅವರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಹೊಣೆ ವಹಿಸಲಾಗಿತ್ತು. ಇದೀಗ ಮಂಜುನಾಥ್ ಪ್ರಸಾದ್ರನ್ನು ಹೆಚ್ಚುವರಿ ಹೊಣೆಯಿಂದ ಮುಕ್ತಗೊಳಿಸಿದ್ದು, ಆ ಹುದ್ದೆಗೆ ಎಂ. ಮಹೇಶ್ವರ್ ರಾವ್ರನ್ನು ವರ್ಗಾವಣೆ ಮಾಡಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಕುಮಾರ್ ನಾಯಕ್ರನ್ನು ವರ್ಗಾಯಿಸಲಾಗಿದೆ. ಕುಮಾರ್ ನಾಯಕ್ರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿರಲಿಲ್ಲ. ಇದೀಗ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.