ಬೆಂಗಳೂರು: ಕೋವಿಡ್-19 ಹರಡದಂತೆ ಮುನ್ನೆಚ್ಚರಿಕೆ ವಹಿಸುವ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಂಪುಟ ಸಹೋದ್ಯೋಗಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಲಹೆ
ಕೊರೊನಾ ಭೀತಿ ಎಲ್ಲೆಡೆ ಹೆಚ್ಚಾಗುತ್ತಿದ್ದು, ಸಿಎಂ ಯಡಿಯೂರಪ್ಪನವರು ಸಂಪುಟ ಸಹೋದ್ಯೋಗಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ್ಧಾರೆ.
ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಮತ್ತು ಇತರರಿಗೆ ಹರಡುವುದನ್ನು ತಡೆಗಟ್ಟಲು, ಎಲ್ಲರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದೇ ಏಕೈಕ ಮಾರ್ಗ. ಹಾಗಾಗಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿ ವರ್ಗದವರು ಕಡ್ಡಾಯವಾಗಿ ಈ ನಿಯಮವನ್ನು ಅನುಸರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು. ಅಂತರ ಕಾಯ್ದುಕೊಳ್ಳೋಣ ಎಂದು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಶಾಸಕ ರೇಣುಕಾಚಾರ್ಯ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿ ಸಭೆ ಮಾಡಿದ್ದ ವಿಡಿಯೋ ನೋಡಿ ತರಾಟೆ ತೆಗೆದುಕೊಂಡಿದ್ದ ಸಿಎಂ, ಎಲ್ಲರಿಗೂ ಟ್ವೀಟ್ ಮೂಲಕ ಸಾಮಾಜಿಕ ಅಂತರದ ಬಗ್ಗೆ ತಿಳಿ ಹೇಳಿದ್ದಾರೆ.