ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಕಾಯ್ದೆಯನ್ನು ಕಾಟಾಚಾರಕ್ಕೆ ತಿದ್ದುಪಡಿ ಮಾಡದೇ ಸಮಗ್ರ ತಿದ್ದುಪಡಿ ಮಾಡಲು ಎಲ್ಲ ರೀತಿಯ ಸಹಕಾರ ನೀಡಲು ಕಾಂಗ್ರೆಸ್ ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಪಕ್ಷದ ಶಾಸಕರೊಂದಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ್ ಸಮಿತಿ ವರದಿ ಹಾಗೂ ಅಬೈಡ್ ಸಲ್ಲಿಸಿದ್ದ ವರದಿಯನ್ನು ಪರಿಗಣಿಸಬೇಕು ಮತ್ತು ರಾಜ್ಯ ಸರ್ಕಾರ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆಗೆ ತಿದ್ದುಪಡಿ ತರಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.