ಕರ್ನಾಟಕ

karnataka

ETV Bharat / state

ಕನ್ನಡದ ಊರುಗಳಿಗೆ ಮಲಯಾಳಿ ಹೆಸರು: ಕೇರಳ ಸಿಎಂಗೆ ಪತ್ರ ಬರೆಯುತ್ತೇನೆಂದ BSY - ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್

ಡಾ.ಸಿ.ಸೋಮಶೇಖರ್​ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದೆ. ಈ ಕೂಡಲೇ ಕೇರಳ ಸರ್ಕಾರಕ್ಕೆ ಹೆಸರುಗಳನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಪತ್ರ ಬರೆಯುತ್ತೇನೆ ಎಂದರು.

ಬಿಎಸ್​ವೈ
ಬಿಎಸ್​ವೈ

By

Published : Jun 28, 2021, 3:17 PM IST

ಬೆಂಗಳೂರು:ಕಾಸರಗೋಡು ಮತ್ತು ಮಂಜೇಶ್ವರ ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದರು. ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲ ಗ್ರಾಮಗಳಿಗೆ ಮಲಯಾಳಿ ಹೆಸರನ್ನಿಡಲು ಹೊರಟಿರುವ ಕೇರಳ ಸರ್ಕಾರದ ಬಗ್ಗೆ ಬಿಎಸ್​ವೈ ಗಮನಕ್ಕೆ ತಂದರು.

ಡಾ.ಸಿ.ಸೋಮಶೇಖರ್​ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದೆ. ಈ ಕೂಡಲೇ ಕೇರಳ ಸರ್ಕಾರಕ್ಕೆ ಹೆಸರುಗಳನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಪತ್ರ ಬರೆಯುತ್ತೇನೆ ಎಂದರು.

ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳಿ ಭಾಷಿಕರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ ಬದುಕನ್ನು ನಿರ್ವಹಿಸುತ್ತಿದ್ದಾರೆ. ಕನ್ನಡ ಭಾಷೆಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಇದನ್ನೂ ಓದಿ:ಕನ್ನಡದಿಂದ ಮಲಯಾಳಂ ಭಾಷೆಗೆ ಗ್ರಾಮಗಳ ಹೆಸರು ಬದಲಾವಣೆ: ಕೇರಳದ ನಿರ್ಧಾರಕ್ಕೆ ಸಚಿವ ಲಿಂಬಾವಳಿ ಆಕ್ಷೇಪ

ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೇ, ಕೇವಲ ಸ್ಥಳೀಯ ಸಂಸ್ಥೆಗಳ ಹಂತದಲ್ಲಿಯೇ ನಡೆದಿರಬಹುದು ಎಂಬ ವಿಷಯವನ್ನು ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸರ್ಕಾರದ ಮಟ್ಟದಲ್ಲಿ ವ್ಯವಹರಿಸುವ ಆಶ್ವಾಸನೆ ನೀಡಿದರು.

ABOUT THE AUTHOR

...view details