ಬೆಂಗಳೂರು:ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ. ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಎಂ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ವಿಧಾನಸೌಧದಲ್ಲಿ ಇಂದು ಸಂಜೆ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಂದ ಘೋಷಣಾ ಪತ್ರ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ ಎಂದರು.