ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಸೋಮವಾರ ನಿಧನರಾದ ಸೇಡಂ ಕ್ಷೇತ್ರದ ಮಾಜಿ ಶಾಸಕ ಬಸವಂತ ರೆಡ್ಡಿ ಪಾಟೀಲ ಮೋತಕಪಲ್ಲಿ ಅವರಿಗೆ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಸಂತಾಪ ಸೂಚಿಸಿರುವ ಖರ್ಗೆ ಸೇಡಂ ಕ್ಷೇತ್ರದ ಮಾಜಿ ಶಾಸಕರಾದ ಬಸವಂತರೆಡ್ಡಿ ಪಾಟೀಲ ಮೋತಕಪಲ್ಲಿ ಅವರ ಅಗಲಿಕೆಯಿಂದ ಕಲಬುರಗಿ ಜಿಲ್ಲೆಯು ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ. ಸುಮಾರು 4 ದಶಕಗಳ ರಾಜಕೀಯ ಜೀವನದಲ್ಲಿ ಅಜಾತಶತ್ರುವಾಗಿ ಬದುಕಿ ಬಾಳಿದ ಪಾಟೀಲರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ಹಾಗೂ ಅಭಿಮಾನಗಳ ದುಃಖದಲ್ಲಿ ನಾನೂ ಭಾಗಿ ಎಂದಿದ್ದಾರೆ.