ಕರ್ನಾಟಕ

karnataka

ETV Bharat / state

ಮಕ್ಕಳಲ್ಲಿ ಅಪೌಷ್ಠಿಕತೆ: ತಜ್ಞರ ಸಮಿತಿ ರಚಿಸಲು ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ಬೆಳಗಾವಿ ಜಿಲ್ಲೆಯ ಅಥಣಿಯ ‘ವಿಮೋಚನಾ’ ಸ್ವಯಂ ಸೇವಾ ಸಂಸ್ಥೆಯ ಬಿ.ಎಲ್.ಪಾಟೀಲ್ ಎಂಬುವರು ಬರೆದಿದ್ದ ಪತ್ರ ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಶಿಬಿರಗಳ ಮೇಲ್ವಿಚಾರಣೆಗೆ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪರಿಣಿತ ವ್ಯಕ್ತಿಯೊಬ್ಬರನ್ನು ಸೇರಿಸಿಕೊಂಡು ಸಮಿತಿ ರಚಿಸಿ ಎಂದು ಸಲಹೆ ನೀಡಿದೆ.

ತಜ್ಞರ ಸಮಿತಿ ರಚಿಸಲು ಸರ್ಕಾರಕ್ಕೆ ಹೈಕೋರ್ಟ್ ಸಲಹೆ
ತಜ್ಞರ ಸಮಿತಿ ರಚಿಸಲು ಸರ್ಕಾರಕ್ಕೆ ಹೈಕೋರ್ಟ್ ಸಲಹೆ

By

Published : Jan 9, 2021, 2:42 PM IST

ಬೆಂಗಳೂರು: ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ತಪಾಸಣೆ ನಡೆಸುವ ಶಿಬಿರಗಳ ಮೇಲ್ವಿಚಾರಣೆಗೆ ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ಬೆಳಗಾವಿ ಜಿಲ್ಲೆಯ ಅಥಣಿಯ ‘ವಿಮೋಚನಾ’ ಸ್ವಯಂ ಸೇವಾ ಸಂಸ್ಥೆಯ ಬಿ.ಎಲ್.ಪಾಟೀಲ್ ಎಂಬುವರು ಬರೆದಿದ್ದ ಪತ್ರ ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಸಲಹೆ ನೀಡಿದೆ.

ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಕಾಲ ಕಾಲಕ್ಕೆ ಆರೊಗ್ಯ ತಪಾಸಣೆಗೊಳಪಡಿಸುವುದು ಬಹಳ ಮುಖ್ಯ. ಅದಕ್ಕಾಗಿ ಮಕ್ಕಳ ಆರೋಗ್ಯ ತಪಾಸಣೆಗೆ ಶಿಬಿರಗಳನ್ನು ಏರ್ಪಡಿಸಬೇಕು. ಪ್ರಾಯೋಗಿಕ ಹಂತದಲ್ಲಿ ಅತಿ ಹೆಚ್ಚು ಸಮಸ್ಯೆ ಇರುವ ಜಿಲ್ಲೆಗಳನ್ನು ಆಯ್ದುಕೊಂಡು ಅಲ್ಲಿ ಶಿಬಿರಗಳನ್ನು ಏರ್ಪಡಿಸಬಹುದು. ಈ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲು, ಶಿಬಿರಗಳ ಮೇಲ್ವಿಚಾರಣೆಗೆ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪರಿಣಿತ ವ್ಯಕ್ತಿಯೊಬ್ಬರನ್ನು ಸೇರಿಸಿಕೊಂಡು ಸಮಿತಿ ರಚಿಸಿ ಎಂದು ಸಲಹೆ ನೀಡಿ, ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ: ಜ.17 ಕ್ಕೆ ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ

ಅರ್ಜಿಯಲ್ಲಿ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅಪೌಷ್ಠಿಕತೆ ಸಮಸ್ಯೆ ಹೆಚ್ಚಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಕೊಳೆಗೇರಿ ನಿವಾಸಿಗಳು, ದಕ್ಷಿಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಆದಿವಾಸಿಗಳು ಇದ್ದಾರೆ. ಅವರಲ್ಲೂ ಅಪೌಷ್ಠಿಕತೆ ಹೆಚ್ಚಾಗಿದೆ. ಆರೋಗ್ಯ ಶಿಬಿರಗಳಿಗೆ ಜಿಲ್ಲೆಗಳನ್ನು ಆಯ್ಕೆ ಮಾಡುವಾಗ ಈ ಪ್ರದೇಶಗಳನ್ನು ಪರಿಗಣಿಸಬೇಕು. ಜತೆಗೆ, ಪ್ರತಿ 3 ತಿಂಗಳಿಗೊಮ್ಮೆ ಆರೋಗ್ಯ ಶಿಬಿರ ನಡೆಸಬೇಕು ಎಂದು ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ವರದಿ ಶಿಫಾರಸು ಮಾಡಿದೆ. ಆದರೆ, ಕಳೆದ ಮಾರ್ಚ್‌ ನಿಂದ ಈವರೆಗೆ ಶಿಬಿರಗಳು ನಡೆದಿಲ್ಲ ಎಂದು ಆರೋಪಿಸಿದ್ದಾರೆ.

For All Latest Updates

ABOUT THE AUTHOR

...view details