ಬೆಂಗಳೂರು: ಕನ್ನಡ ಬಾವುಟಕ್ಕೆ ಬೆಂಕಿಯಿಟ್ಟ ಆರೋಪದಡಿ ಉತ್ತರ ಭಾರತ ಮೂಲದ ಯುವಕನನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕರುನಾಡು ಸೇವಕರು ಸಂಘದ ಯುವ ಅಧ್ಯಕ್ಷ ನವೀನ್ ನರಸಿಂಹ ಎಂಬುವರು ನೀಡಿದ ದೂರಿನ ಮೇರೆಗೆ ಅಮೃತೇಶ್ ಎಂಬಾತನನ್ನು ಬಂಧಿಸಲಾಗಿದೆ.
ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಯ ಬಂಧನ - ಕರ್ನಾಟಕ ಧ್ವಜಕ್ಕೆ ಬೆಂಕಿ ಹಚ್ಚಿದ ಆರೋಪಿ ಬಂಧನ
ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದ ಕಿಡಿಗೇಡಿಯ ಬಂಧನ
ನಿನ್ನೆ ತಡರಾತ್ರಿ ಪರಂಗಿಪಾಳ್ಯದ ಅಯ್ಯಂಗಾರ್ ಬೇಕರಿ ಬಳಿ ಬಾವುಟಕ್ಕೆ ಲೈಟರ್‌ನಿಂದ ಬೆಂಕಿ ಹಚ್ಚುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಿಡಿಗೇಡಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಎಚ್ಎಸ್ಆರ್ ಲೇಔಟ್ ನಿವಾಸಿಯಾಗಿರುವ ಅಮೃತೇಶ್ ಕಂಪೆನಿಯೊಂದರಲ್ಲಿ ಫ್ರೀ ಲಾನ್ಸರ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಶಾಸಕ ಎಸ್ ಆರ್ ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ: ಕುಳ್ಳ ದೇವರಾಜ್ ಬಂಧನ