ಕರ್ನಾಟಕ

karnataka

ETV Bharat / state

ಗಾಂಜಾ ಮಾರಾಟ ಕೇಸ್​ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಆತ್ಮಹತ್ಯೆ - Prisoner committed suicide

ಗಾಂಜಾ ಮಾರಾಟ ಕೇಸ್​ನಲ್ಲಿ ಹೊಸಕೋಟೆ ಪೊಲೀಸರು ಬಂಧಿಸಿ ಆಗಸ್ಟ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಆರೋಪಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Man committed suicide in jail who arrested for illegal marijuana case
ಗಾಂಜಾ ಮಾರಾಟ ಕೇಸ್​ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಆತ್ಮಹತ್ಯೆ

By

Published : Aug 24, 2020, 10:56 AM IST

ಬೆಂಗಳೂರು: ಅಕ್ರಮ ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಹೊಸಕೋಟೆಯ ದಾಸರಹಳ್ಳಿ ನಿವಾಸಿ ಲಕ್ಷ್ಮಯ್ಯ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಹೊಸಕೋಟೆ, ಆನೇಕಲ್, ಸಿಲಿಕಾನ್ ಸಿಟಿಯ ಬಳಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಯುವಕರನ್ನು ಟಾರ್ಗೆಟ್​​ ಮಾಡಿ ಗಾಂಜಾ ಮಾರಾಟ ಮಾಡುತ್ತಿದ್ದನಂತೆ.

ಬೆಂಗಳೂರು ಕೇಂದ್ರ ಕಾರಾಗೃಹ

ಹೀಗಾಗಿ‌ ಗಾಂಜಾ ಮಾರಾಟ ಕೇಸ್​ನಲ್ಲಿ ಹೊಸಕೋಟೆ ಪೊಲೀಸರು ಬಂಧಿಸಿ ಆಗಸ್ಟ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಸದ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಆರೋಪಿ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ಆತ್ಮಹತ್ಯೆ‌ ಮಾಡಿಕೊಂಡಿದ್ದಾನೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು‌‌ ತನಿಖೆ ಮುಂದುವರೆಸಿದ್ದಾರೆ. ಹಾಗೆಯೇ ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಎಸ್​​​​​​ಪಿ ರವಿ ಡಿ. ಚನ್ನಣ್ಣನವರ್ ಮಾಹಿತಿ ಕಲೆ‌ಹಾಕಿದ್ದಾರೆ.

ABOUT THE AUTHOR

...view details